ಮಹಿಳೆಯರು ಯೋಜನೆಗಳ ಸದುಪಯೋಗ ಪಡೆಯಲಿ
ಗದಗ: ಮಹಿಳೆಯರಿಗಾಗಿ ಸರ್ಕಾರ ಹಲವು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಸದುಪಯೋಗ ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಐ. ಕುಂಬಾರ ಹೇಳಿದರು.
ಅವರು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಭವನದಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ವಾಣಿಜ್ಯೋದ್ಯಮಿಗಳ ಉನ್ನತೀಕರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಸ್ವಾವಲಂಭಿತನದಿಂದ ಪುರುಷರಷ್ಟೇ ಸರಿಸಮಾನವಾಗಿ, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಕಲ್ಪಿಸುವ ಉದ್ದೇಶದಿಂದಾಗಿ ಸರ್ಕಾರವು ಮಹಿಳೆಯರಿಗೆ ಅನೇಕ ತರಬೇತಿ ನೀಡಿ, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸುವುದರ ಜತೆಗೆ ಸಬ್ಸಿಡಿಯನ್ನೂ ನೀಡಿ ಯಶಸ್ವಿ ಉದ್ದಿಮೆಯಾಗಲು ಅನೇಕ ಯೋಜನೆಗಳನ್ನು ರೂಪಿಸುತ್ತಿದೆ. ಇನ್ನು ಸಾಲ ಪಡೆದಂತಹ ಮಹಿಳಾ ಉದ್ಯಮಿಗಳು ಸರಿಯಾದ ಸಮಯಕ್ಕೆ ಸಾಲ ಮರಳಿ ನೀಡಿ ಬ್ಯಾಂಕ್ ಜತೆಗೆ ಒಳ್ಳೆಯ ಸಂಬಂಧ ಹೊಂದಿದಲ್ಲಿ ಮುಂದೆ ಹೆಚ್ಚಿನ ಅನುಕೂಲವಾಗುತ್ತದೆ. ಇನ್ನು ಮಹಿಳೆಯರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾಗಿದೆ. ಇದರಿಂದ ಅವರ ಕುಟುಂಬವನ್ನು ಉನ್ನತಮಟ್ಟಕ್ಕೆ ತೆಗೆದುಕೊಂಡು ಹೋಗುವುದರ ಜತೆಗೆ ಉದ್ದಿಮೆ ರಂಗದಲ್ಲಿಯೂ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ. ಇಂದಿನ ಸಮಾಜದಲ್ಲಿ ಮಹಿಳೆಯರಿಗೆ ಉದ್ದಿಮೆಗಳನ್ನು ಸ್ಥಾಪಿಸಲು ಸಾಕಷ್ಟು ಅವಕಾಶಗಳು ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ನೂರಾರು ಜನರಿಗೆ ಉದ್ಯೋಗ ನೀಡಿ ಸಮಾಜದ ಪ್ರಗತಿಗೆ ದಾರಿದೀಪವಾಗಬೇಕು ಎಂದರು. ಆದರ್ಶ ಶಿಕ್ಷಣ ಸಂಸ್ಥೆಯ ಉಪನ್ಯಾಸಕಿ ಸಲ್ಮಾ ಬೆಳಗಾಂವ ಉಪನ್ಯಾಸ ನೀಡಿದರು. ಅತಿಥಿಗಳಾಗಿ ಆಗಮಿಸಿದ್ದ ಜಯಶ್ರೀ ಹಿರೇಮಠ, ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಎಲ್.ಸಿ. ಲಿಂಬಯ್ಯಸ್ವಾಮಿಮಠ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸಿ.ಪಿ. ಮಾಡಳ್ಳಿ ಮುಂತಾದವರು ಉಪಸ್ಥಿತರಿದ್ದರು. ಸಂಸ್ಥೆಯ ಗೌರವ ಕಾರ್ಯದರ್ಶಿ ವೀರಣ್ಣ ಬೇವಿನಮರದ ನಿರೂಪಿಸಿದರು. ಇಂಡಸ್ಟ್ರಿಯಲ್ ಉಪಸಮಿತಿ ಚೇರ್ಮನ್ ಶಿವಕುಮಾರ ಪಾಟೀಲ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

