ಮೋದಿ ಚಾಯ್ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆ
ಮುಂಡರಗಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಮಹಾರಾಷ್ಟ್ರದ ದಾಬಡಿ ಗ್ರಾಮದಲ್ಲಿ ಗುರುವಾರ ಸಂಜೆ ರೈತರೊಂದಿಗೆ ನಡೆಸಿದ ಚಾಯ್ ಪೇ ಚರ್ಚಾ ಕಾರ್ಯಕ್ರಮದ ವೀಕ್ಷಣೆಗೆ ಪಟ್ಟಣದ ಮಿನಿವಿಧಾನಸೌಧದ ಎದುರಿನ ಟೀ ಸ್ಟಾಲ್ನಲ್ಲಿ ಶಂಕರ ಪಾಟೀಲ ಅವರ ಬಿಜೆಪಿ ಮುಖಂಡ ಕರಬಸಪ್ಪ ಹಂಚಿನಾಳ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಬಿಜೆಪಿ ಈಗಾಗಲೇ ಪ್ರಧಾನಿ ಅಭ್ಯರ್ಥಿಯನ್ನಾಗಿ ನರೇಂದ್ರ ಮೋದಿ ಅವರನ್ನು ಘೋಷಣೆ ಮಾಡಿದ್ದು, ಮೋದಿಯವರು ರೈತರ ಬಗ್ಗೆ ಇರುವ ಕಾಳಜಿಯಿಂದಾಗಿ ದೇಶದ ರೈತರ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ ತಾವು ಪ್ರಧಾನಿಯಾದ ನಂತರ ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಹೇಮಗಿರೀಶ ಹಾವಿನಾಳ ಮಾತನಾಡಿ, ದೇಶದ ಭವಿಷ್ಯದ ದೃಷ್ಟಿಯಿಂದ ರೈತರ ಸಮಸ್ಯೆಗಳ ಕುರಿತು ರೈತರೊಂದಿಗೆ ನೇರವಾಗಿ ಚರ್ಚಿಸಿ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಚಾಯ್ ಪೇ ಚರ್ಚಾ ಕಾರ್ಯಕ್ರಮ ಹಿಂದಿ ಭಾಷೆಯಲ್ಲಿ ಪ್ರಸಾರವಾಗುವುದರಿಂದ ಇಲ್ಲಿನ ರೈತರಿಗೆ ತಿಳಿಸುವ ಉದ್ದೇಶದಿಂದ ಇದನ್ನು ಬಿಜೆಪಿ ಕಾರ್ಯಕರ್ತರು ಕನ್ನಡದಲ್ಲಿ ರೈತರಿಗೆ ತಿಳಿಸುವ ವ್ಯವಸ್ಥೆ ಮಾಡಿದ್ದಾರೆ ಎಂದರು. ದೇವಪ್ಪ ಕಂಬಳಿ, ರಜನೀಕಾಂತ ದೇಸಾಯಿ, ರುದ್ರಪ್ಪ ಲದ್ದಿ, ಎಸ್.ವಿ. ಪಾಟೀಲ, ಶಿವಪ್ಪ ಚಿಕ್ಕಣ್ಣವರ, ದೇವಪ್ಪ ಇಟಗಿ, ಶಿವು ನವಲಗುಂದ, ಮಂಜುನಾಥ ಇಟಗಿ, ಬಸವರಾಜ ಬಿಳಿಮಗ್ಗದ, ಮೋಹನ್ ದೇಸಾಯಿ, ಪುರಸಭೆ ವಿರೋಧ ಪಕ್ಷದ ನಾಯಕ ಪ್ರಭು ಅಬ್ಬಿಗೇರಿ, ಸುರೇಶ ಮಾಳೆಕೊಪ್ಪ, ಶಂಕರಗೌಡ ಪಾಟೀಲ ಸೇರಿದಂತೆ ಅನೇಕರು ಉಪಪಸ್ಥಿತರಿದ್ದು ಕಾರ್ಯಕ್ರಮ ವೀಕ್ಷಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

