ಮತ ಜಾಗೃತಿಗಾಗಿ ಮಾನವ ಸರಪಳಿ
ಲಕ್ಷ್ಮೇಶ್ವರ: ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆ ನಂ. 4ರ ವಿದ್ಯಾರ್ಥಿಗಳು ಶುಕ್ರವಾರ ಬೆಳಗ್ಗೆ ಪಟ್ಟಣದ ಮಹಾಕವಿ ಪಂಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ನಮ್ಮ ದೇಶದ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಬೇಕು ಎಂದು ಪುರಸಭೆ ವ್ಯವಸ್ಥಾಪಕ ಪಿ.ಸಿ. ತುಪ್ಪದ ಹೇಳಿದರು. ನಂತರ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸೈಕಲ್ ಜಾಥಾ ನಡೆಸಿ ಮತ ಜಾಗೃತಿ ಅಭಿಯಾನ ಮಾಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯಾಧ್ಯಾಪಕಿ ಡಿ.ಎಫ್. ಪಾಟೀಲ, ಶಿಕ್ಷಕರಾದ ಈಶ್ವರ ಮೆಡ್ಲೇರಿ, ಬಸವರಾಜ ದನದಮನಿ ಹಾಗೂ ಪುರಸಭೆ ಸಿಬ್ಬಂದಿ ಎಚ್.ಎನ್. ಬಳ್ಳಾರಿ, ಎಂ.ಎಸ್. ಬೆಂತೂರ. ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಕೋರದಾಳ, ಉಪಾಧ್ಯಕ್ಷೆ ಚಿತ್ರಾ ಹಣಗಿ ಹಾಗೂ ಶಿಕ್ಷಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಮುಳಗುಂದ: ಮತದಾನ ಜಾಗೃತಿ ಜಾಥಾ
ಮುಳಗುಂದ: ಇಲ್ಲಿಗೆ ಸಮೀಪದ ಚಿಂಚಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಂಚಲಿ, ಕಲ್ಲೂರು, ನೀಲಗುಂದ ಗ್ರಾಮಗಳಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈಚೆಗೆ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಮತದಾನ ಜಾಗೃತಿ ಜಾಥಾ ನಡೆಸಿದರು. ಏ. 17ರಂದು ಜರಗುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಮತ ಚಲಾಯಿಸುವಂತೆ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಗ್ರಾಪಂ ಪಿಡಿಒ ಎಂ.ಎ. ಗಾಜಿ, ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು.
ಉದಾಸಿಯಿಂದ ಶ್ರೀಗಳ ಭೇಟಿ
ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಅವರು ನಗರದ ಹುಕ್ಕೇರಿ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಮಠದ ಪೀಠಾಧಿಪತಿ ಸದಾಶಿವ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಶಹರ ಘಟಕದ ಅಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರ, ಜಿಲ್ಲಾ ವಕ್ತಾರ ಪ್ರಭು ಹಿಟ್ನಳ್ಳಿ, ಪಕ್ಷದ ಮುಖಂಡರಾದ ಬಸವರಾಜ ಮಾಸೂರ, ಚನಬಸಪ್ಪ ಕೋಡಿಹಳ್ಳಿ, ಕಲ್ಯಾಣಕುಮಾರ ಶೆಟ್ಟರ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

