ಗಜೇಂದ್ರಗಡ: ಚೆಕ್ಪೋಸ್ಟ್ ಹತ್ತಿರ ವಾಹನ ಪರಿಶೀಲನೆ
ಗಜೇಂದ್ರಗಡ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹಾವೇರಿ ಮತಕ್ಷೇತ್ರ ಗಡಿಭಾಗವಾದ ಗಜೇಂದ್ರಗಡ ಸಮೀಪದ ಪುರ್ತಗೇರಿ ಬಳಿ ಜಿಲ್ಲಾಡಳಿತದಿಂದ ತೆರೆಯಲಾದ ಚೆಕ್ಪೋಸ್ಟ್ ಹತ್ತಿರ ಶುಕ್ರವಾರ ರೋಣ ಸಿಪಿಐ ವೆಂಕಟಪ್ಪ ನಾಯಕ ಅವರು ವಾಹನವೊಂದರ ಪರಿಶೀಲನೆ ನಡೆಸಿದರು. ಬಳಿಕ ಅವರು ಮಾತನಾಡಿ, ಲೋಕಸಭಾ ಚುನಾವಣೆ ಪ್ರಯುಕ್ತ ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕಿನಾದ್ಯಂತ ಕಟ್ಟೆಚ್ಚರ ವಹಿಸಿ, ಚೆಕ್ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸಿ ಮಾಹಿತಿ ದಾಖಲಿಸಿಕೊಳ್ಳಲಾಗುತ್ತಿದೆ. ಚೆಕ್ಪೋಸ್ಟ್ನಲ್ಲಿ ಪೊಲೀಸರ ಜತೆ ಹೋಮಗಾರ್ಡ್ ನೇಮಿಸಲಾಗಿದೆ ಎಂದರು. ಸ್ಥಳೀಯ ಠಾಣೆ ಪಿಎಸ್ಐ ಎಚ್.ಆರ್. ನಡುಗಡ್ಡಿ, ಅರಣ್ಯ ಇಲಾಖೆ ಟಿ.ವೈ. ಜೋಗಿನ, ಎಂ.ಕೆ. ಅಡಶೆಟ್ಟಿ, ಜಿ.ಎಸ್. ತಂತ್ರಿ ಇತರ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.