ಸ್ಥಾನಕ್ಕೆ ಚ್ಯುತಿಯಾಗದಂತೆ ಕೆಲಸ ಮಾಡಿರುವೆ: ಉದಾಸಿ
ರಾಣಿಬೆನ್ನೂರು: ಸಂಸದ ಸ್ಥಾನಕ್ಕೆ ಚ್ಯುತಿ ಬಾರದಂತೆ ಕಾಯಾ, ವಾಚಾ, ಮನಸಾ ಕೆಲಸ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಗಾಗಿ ಸಂಸದನ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಿದ ತೃಪ್ತಿಯಿದೆ ಎಂದು ಸಂಸದ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಹೇಳಿದರು.
ತಾಲೂಕಿನ ಬೇಲೂರು, ಮೇಡ್ಲೆರಿ, ಆರೇಮಲ್ಲಾಪುರ, ಬಿದರಿ, ಐರಣಿ, ಕೂಡಿಯಾಲ, ಕವಲೆತ್ತು, ಮಾಕನೂರು, ತುಮ್ಮಿನಕಟ್ಟಿ, ಮಾಳನಾಯಕನಹಳ್ಳಿ, ನಿಟ್ಟೂರು, ಕುಪ್ಪೆಲೂರು, ಕೋಟಿಹಾಳ, ಮದೇನೂರು, ಅಂತರವಳ್ಳಿ, ಹಲಗೇರಿ, ಇಟಗಿ, ಕರೂರು, ಚಳಗೇರಿ ಸೇರಿದಂತೆ 20 ಗ್ರಾಮ ಪಂಚಾಯಿತಿ ಕೇಂದ್ರ ಸ್ಥಳಗಳಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹಾಗೂ ಪಕ್ಷದ ಮುಖಂಡರೊಂದಿಗೆ ಪ್ರಚಾರ ಕಾರ್ಯ ನಡೆಸಿದ ನಂತರ ಕಮದೋಡ ಗ್ರಾಮದಲ್ಲಿ ಏರ್ಪಡಿಸಿದ್ದ ತಾಲೂಕು ಗ್ರಾಮಾಂತರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಶಿಕ್ಷಣ, ಸಂಸ್ಕಾರ, ಸಾಮಾಜಿಕ ಸಮಾನತೆ, ಸಾಮಾಜಿಕ ಸಾಮರಸ್ಯ, ರಾಷ್ಟ್ರೀಯ ಮನೋಭಾವನೆಗಳನ್ನು ಜಾಗೃತಿಗೊಳಿಸಲು ಬಿಜೆಪಿ ಸಮರ್ಥವಾಗಿದೆ. ಈ ಮಹಾನ್ ಕಾರ್ಯದಲ್ಲಿ ನಾನು ಸಕ್ರಿಯವಾಗಿ ಪಾಲ್ಗೊಂಡಿದ್ದು, ಸಂಸದನಾಗಿದ್ದ ಸಮಯದಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಸಲ್ಲಿಸಿರುವ ಸೇವೆಯನ್ನು ಗಮನಿಸಿ ಮತ್ತೊಮ್ಮೆ ನನಗೆ ಮತ ನೀಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಶಿವಕುಮಾರ ಉದಾಸಿ ಮತದಾರರಲ್ಲಿ ವಿನಂತಿಸಿದರು.
ಮಾಜಿ ಶಾಸಕ ಜಿ. ಶಿವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಎಸ್. ರಾಮಲಿಂಗಣ್ಣನವರ, ಜಿಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮಂಜುನಾಥ ಓಲೇಕಾರ, ತಾಲೂಕು ಬಿಜೆಪಿ ಅಧ್ಯಕ್ಷ ಬಸವರಾಜ ಲಕ್ಷ್ಮೇಶ್ವರ, ನಗರಾಧ್ಯಕ್ಷ ವೀರಣ್ಣ ಅಂಗಡಿ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಶ್ವನಾಥ ಪಾಟೀಲ, ಬಿಜೆಪಿ ಮುಖಂಡ ಮೈಲಪ್ಪ ಗುಡಗೂರು, ತಾಲೂಕು ಪಂಚಾಯಿತಿ ಸದಸ್ಯೆ ಚನ್ನಬಸವ್ವ ಗೌಡ್ರ, ಚಂದ್ರಣ್ಣ ಸೋಪ್ಪಿನ, ಯುವ ಮೋರ್ಚಾ ಅಧ್ಯಕ್ಷ ಕಿರಣಕುಮಾರ ಅಂಗಡಿ, ಕಮದೋಡ ಗ್ರಾಮದ ಮುಖಂಡ ಮಲ್ಲೇಶಪ್ಪ ಅಂಗಡಿ, ಮಳ್ಳಪ್ಪ ಮೇಲ್ಮಾಳಗಿ, ಮಂಜಪ್ಪ ಕಡ್ಲೇಪ್ಪನವರ, ಕರಬಸಪ್ಪ ಹಲಗೇರಿ, ಮಂಜಪ್ಪ ಅಂಗಡಿ, ತಾಲೂಕು ಬಿಜೆಪಿ ಕಾರ್ಯದರ್ಶಿ ಪ್ರವೀಣಕುಮಾರ ಕೂಪರ್ಡೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

