ಗದಗ

ವಸತಿ ಶಾಲೆ ಪರೀಕ್ಷೆ: 1200 ವಿದ್ಯಾರ್ಥಿಗಳು ಹಾಜರು

Published On :

ರೋಣ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ 2014-15ನೇ ಸಾಲಿನ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 6ನೇ ತರಗತಿ ದಾಖಲಾತಿಗೆ ಭಾನುವಾರ ಪಟ್ಟಣದ ವಿವಿಧ ಕೇಂದ್ರಗಳಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷೆಗೆ ಒಟ್ಟು 1200 ವಿದ್ಯಾರ್ಥಿಗಳು ಹಾಜರಿದ್ದರು.
ಪಟ್ಟಣದ ವಿ.ಎಫ್. ಪಾಟೀಲ ಪ್ರೌಢ ಶಾಲೆ, ಸರ್ಕಾರಿ ಸ್ವತಂತ್ರ ಪಪೂ ಕಾಲೇಜು, ಕೆ.ವಿ. ಶಾಂತಗೇರಿಮಠ ಪ್ರೌಢಶಾಲೆ, ನ್ಯೂ ಲಿಟಲ್ ಫ್ಲವರ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಶಾರದಾ ಬಾಲಕಿಯರ ಪ್ರೌಢ ಶಾಲೆಯ ಒಟ್ಟು 5 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ತಾಲೂಕಿನಲ್ಲಿ ಪರೀಕ್ಷೆಗೆ ಒಟ್ಟು 1225 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. 1200 ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 25 ವಿದ್ಯಾರ್ಥಿಗಳು ಗೈರಾಗಿದ್ದರು. ಗದಗ ಜಿಲ್ಲೆಯಲ್ಲಿ ಒಟ್ಟು 11 ವಸತಿ ಶಾಲೆಗಳಿವೆ. ಅದರಲ್ಲಿ ರೋಣ ತಾಲೂಕಿನಲ್ಲಿ 3 ವಸತಿ ಶಾಲೆಗಳಿದ್ದು, ಗಜೇಂದ್ರಗಡದಲ್ಲಿ ಕಿತ್ತೂರ ರಾಣಿ ಚನ್ನಮ್ಮ, ಕಾಲಕಾಲೇಶ್ವರದಲ್ಲಿ ಮೊರಾರ್ಜಿ ದೇಸಾಯಿ ಮತ್ತು ರೋಣ ಪಟ್ಟಣದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿವೆ. ಭಾನುವಾರ ಜರುಗಿದ ಜಿಲ್ಲೆಯಲ್ಲಿನ ವಸತಿ ಶಾಲೆಗಳಿಗಳ 6ನೇ ತರಗತಿಗೆ ಪ್ರವೇಶ ಪಡೆಯಲು ತಾಲೂಕಿನಿಂದ ಒಟ್ಟು 1200 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಿದೆ. ಎಲ್ಲೆಡೆ ಶಾಂತಿಯುತವಾಗಿ ಪರೀಕ್ಷೆಗಳು ಜರುಗಿವೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಖಾಜಾಹುಸೇನ್ ಮುಧೋಳ 'ಕನ್ನಡಪ್ರಭ'ಕ್ಕೆ ತಿಳಿಸಿದರು. ಪಟ್ಟಣದ 5 ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧಿಕ್ಷಕರಾಗಿ ಎ.ಬಿ. ಹೊನ್ನವಾಡ, ರಾಜು ಮಡಿವಾಳರ, ಎಂ.ಸಿ. ಖಾನೇಕರ, ಪಿ.ಎಸ್. ಬಳಿಗೇರ ಮತ್ತು ಕೆ.ಎಂ. ದಿವಾನದ ಕಾರ್ಯ ನಿರ್ವಹಿಸಿದರು. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಖಾಜಾಹುಸೇನ ಮುದೋಳ ಮತ್ತು ವಸತಿ ನಿಲಯಗಳ ಪರೀಕ್ಷಾ ತಾಲೂಕು ನೋಡಲ್ ಅಧಿಕಾರಿ, ಜಿಲ್ಲಾ ಶಿಕ್ಷಣಾಧಿಕಾರಿ ಮಂಗಲಾ ತಾಪಸ್ಕರ, ಬಿಇಒ ಡಿ.ಐ. ಅಸುಂಡಿ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಎಲ್.ಎ. ಮೇಸ್ತಾ ಭೇಟಿ ನೀಡಿ ವೀಕ್ಷಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.