ಕಲ್ಲು ತೂರಾಟ: ಲಘು ಲಾಠಿ ಪ್ರಹಾರ
ಕನ್ನಡಪ್ರಭ ವಾರ್ತೆ, ಗದಗ, ಮಾ. 24
ನಗರದ ಮುಖ್ಯ ಮಾರುಕಟ್ಟೆ ಪ್ರದೇಶವಾದ ಕಮ್ಮಾರ ಸಾಲ ಭಾಗದಲ್ಲಿ ಕ್ಷುಲಕ ಕಾರಣವನ್ನೇ ಮುಂದಿಟ್ಟುಕೊಂಡು ಜರುಗಿದ ಜಗಳ ವಿಪರೀತಕ್ಕೆ ತಿರುಗಿ, ಕಲ್ಲು ತೂರಾಟ ಹಾಗೂ ಕಟ್ಟಿಗೆಳ ಮೂಲಕ ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ಸೋಮವಾರ ಸಂಜೆ ಜರುಗಿದ್ದು, ಮಾರುಕಟ್ಟೆಯಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಜನನಿಬಿಡ ಪ್ರದೇಶದಲ್ಲಿ ವೃದ್ಧನೋರ್ವನ ಕಾಲು ತುಳಿದ ಘಟನೆಯೇ ಇಷ್ಟೊಂದು ವಿಕೋಪ ಕಾರಣವಾಗಿದೆ ಎನ್ನಲಾಗಿದೆ.
ಇಲ್ಲಿ ಇಕ್ಕಟಾದ ರಸ್ತೆ ಇದ್ದು, ಪರಸ್ಪರ ಕಲ್ಲು ತೂರಾಟ ಮಾಡಿದ್ದರಿಂದ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಏಕಾಏಕಿ ನಡೆದ ಈ ಘಟನೆಯಿಂದಾಗಿ ಸೋಮವಾರ ಮಾರುಕಟ್ಟೆಗೆ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಸಾರ್ವಜನಿಕರಲ್ಲಿ ಆತಂಕ ಹಾಗೂ ಗೊಂದಲ ಉಂಟಾಗಿದೆ.
ಕೆಲಕಾಲ ಜನರು ಚೆಲ್ಲಾಪಿಲ್ಲಿಯಾಗಿ ಓಡಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಗದಗ ಶಹರ ಪೊಲೀಸರು, ಪರಿಸ್ಥಿತಿ ಹತೋಟಿಗೆ ತರಲು ಲಘು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸುವಲ್ಲಿ ಯಶಸ್ವಿಯಾದರು.
ಡಿವೈಎಸ್ಪಿ ಭೇಟಿ: ಸ್ಥಳಕ್ಕೆ ಧಾವಿಸಿದ ಡಿಎಸ್ಪಿ ವಿಜಯ ಡಂಬಳ ನೇತೃತ್ವದ ಪೊಲೀಸ್ ತಂಡ ಮುಂಜಾಗ್ರತಾ ಕ್ರಮವಾಗಿ ಅಂಗಡಿಗಳನ್ನು ಮುಚ್ಚಿಸಿದರು. ಗುಂಪು ಗುಂಪಾಗಿ ನಿಂತಿದ್ದ ಎರಡು ಕೋಮಿನ ಯುವಕರನ್ನು ಚದುರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ನಂತರ ಮಾರಕಟ್ಟೆ ಪ್ರದೇಶದಲ್ಲಿರುವ ಕೆಲ ಪ್ರಮುಖ ಅಂಗಡಿಗಳ ಹೊರಗಡೆ ಅಳವಡಿಸಲಾದ ಸಿಸಿ ಕ್ಯಾಮೆರಾಗಳಲ್ಲಿನ ಫೂಟೇಜ್ಗಳನ್ನು ವೀಕ್ಷಿಸಿದರು. ನಂತರ ಪೊಲೀಸ್ ಇಲಾಖೆಯಿಂದ ಚಿತ್ರೀಕರಿಸಲಾದ ವಿಡಿಯೋಗಳನ್ನು ಪರಿಶೀಲಿಸಿದ ಪೊಲೀಸರು, ಅದರ ಆಧಾರದಲ್ಲಿ ಕೆಲವರನ್ನು ವಶಕ್ಕೆ ಪಡೆದರು.
ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನ ನಡೆಸಿದ್ದಾರೆ. ಮಾರುಕಟ್ಟೆ ಸೇರಿದಂತೆ ಅವಳಿ ನಗರದ ಆಯಕಟ್ಟಿನ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಹಾಕಲಾಗಿದ್ದು, ನಗರದ ಪ್ರಮುಖ ಸ್ಥಳಗಳಲ್ಲಿಯೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

