ಗದಗ

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

Published On :

ಗದಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾ. 28ರಿಂದ ಏಪ್ರಿಲ್ 9ರ ವರೆಗೆ ಬೆಳಗ್ಗೆ 9.30ರಿಂದ ಸಂಜೆ 5.30ರ ವರೆಗೆ ಜರುಗಿಸಲಾಗುವುದು.
ಪರೀಕ್ಷಾ ಸಮಯದಲ್ಲಿ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ಪರೀಕ್ಷಾ ಕೇಂದ್ರದಿಂದ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷೆಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಗದಗ ಜಿಲ್ಲೆಯ 53 ಪರೀಕ್ಷಾ ಕೇಂದ್ರಗಳಲ್ಲಿ ಮಾ. 28ರಿಂದ ಏ. 9ರ ವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶ ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ನಗರ, ಪಟ್ಟಣ, ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್ ಬಂದ್ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆ ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.