ಯುಪಿಎಯಿಂದ ದೇಶ ದಿವಾಳಿ: ಶೆಟ್ಟರ್
ಲಕ್ಷ್ಮೇಶ್ವರ: ಕಳೆದ 10 ವರ್ಷಗಳಿಂದ ದೇಶವನ್ನಾಳುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ದೇಶವನ್ನು ದಿವಾಳಿ ಮಾಡಿದ್ದು, ಈ ಸರ್ಕಾರದ ಸಾಧನೆಗಳಾದ ಭ್ರಷ್ಟಾಚಾರ, ಹಗರಣ ಮತ್ತು ಬೆಲೆ ಏರಿಕೆ ಸಮಸ್ಯೆಗಳಿಂದಾಗಿ ಜನ ಸಾಮಾನ್ಯರು ತತ್ತರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಅವರು ಸಮೀಪದ ಶಿಗ್ಲಿ ಗ್ರಾಮದಲ್ಲಿ ಹಾವೇರಿ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಪ್ರಚಾರಾರ್ಥ ಜಿಪಂ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಮೋದಿ ಅವರ ಸುನಾಮಿ ಬೀಸುತ್ತಿದ್ದು, ಇದರಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿ ಬಿಜೆಪಿ ಕನಿಷ್ಠ 20 ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ಅವರು, ಪ್ರಸ್ತುತ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ತಮ್ಮೊಳಗಿನ ಕಚ್ಚಾಟವೇ ಕಾರಣವಾಗಿದ್ದು, ಮತಗಳ ವಿಭಜನೆಯಿಂದ ಪಕ್ಷ ಅಧಿಕಾರ ಕಳೆದುಕೊಂಡಿದ್ದು, ಬಿಜೆಪಿಯ ಮೇಲೆ ಜನರ ಪ್ರೀತಿ ವಿಶ್ವಾಸ, ಆಶೀರ್ವಾದ ಸದಾ ಇದೆ ಎಂದರು.
ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳಕಪ್ಪ ಬಂಡಿ, ಜಿಪಂ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ, ಡಾ.ವೈ.ಎಫ್. ಹಂಜಿ, ಜಿಪಂ ಅಧ್ಯಕ್ಷೆ ಕಮಲಮ್ಮ ಸಜ್ಜನ, ಜಿಪಂ ಸದಸ್ಯೆ ನಿರ್ಮಲಾ ಬರದೂರ, ಜಿಪಂ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡ್ರ, ತಾಪಂ ಅಧ್ಯಕ್ಷೆ ಸುನಂದಮ್ಮ ಬಿದರಳ್ಳಿ, ಗ್ರಾಪಂ ಅಧ್ಯಕ್ಷ ಡಿ.ವೈ. ಹುನಗುಂದ, ಎಂ.ಎಸ್. ಕರಿಗೌಡರ, ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ಶಿಗ್ಲಿ ರಾಮಣ್ಣ ಲಮಾಣಿ, ವೀರಣ್ಣ ಹತ್ತಿಕಾಳ, ಸೋಮಣ್ಣ ಡಾಣಗಲ್, ಚಂದ್ರು ತಳವಾರ, ಸಿದ್ದಣ್ಣ ಯಲಿಗಾರ, ಈರಣ್ಣ ಅಕ್ಕೂರ, ಕೃಷ್ಣಾ ಬಿದರಳ್ಳಿ, ಹನಮಂತಪ್ಪ ತಳವಾರ ಮತ್ತಿತರರಿದ್ದರು. ಶಿವಾನಂದ ಶಿರಹಟ್ಟಿ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

