ಭ್ರಷ್ಟಾಚಾರ ನಿರ್ಮೂಲನೆಗಾಗಿ ಬಿಜೆಪಿ ಬೆಂಬಲಿಸಿ
ಕನ್ನಡಪ್ರಭ ವಾರ್ತೆ, ಮುಂಡರಗಿ, ಮಾ. 30
ಯುಪಿಎ ಸರ್ಕಾರದ ದುರಾಡಳಿತದಿಂದ ಜನತೆ ಬೇಸತ್ತಿದೆ. ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆಗಾಗಿ ಬಿಜೆಪಿಗೆ ಬೆಂಬಲಿಸುವ ಮೂಲಕ ಹಾವೇರಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿಗೆ ಮತ ನೀಡಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಮನವಿ ಮಾಡಿದರು.
ಅವರು ಭಾನುವಾರ ಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ಏರ್ಪಡಿಸಿದ್ದ ಭಾರತ ಗೆಲ್ಲಿಸಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ರೈತರು ಬೆಂಬಲ ಬೆಲೆಗೆ ಮಾರಾಟ ಮಾಡಿದ ಗೋವಿನಜೋಳಕ್ಕೆ ಇದುವರೆಗೆ ಹಣ ನೀಡಿಲ್ಲ. ಗದಗ ಜಿಲ್ಲೆಯಲ್ಲಿಯೇ ಕೋಟ್ಯಂತರ ರುಪಾಯಿ ರೈತರಿಗೆ ಹಣ ಪಾವತಿಯಾಗಬೇಕಿದೆ. ರೈತರನ್ನು ಸಂಕಷ್ಟಕ್ಕೆ ತಂದು ನಿಲ್ಲಿಸಿದ ಈ ಸರ್ಕಾರ ನಮಗೆ ಬೇಡವೇ ಬೇಡ ಎಂದು ಎಲ್ಲ ಮತದಾರರು ನಿರ್ಧರಿಸಬೇಕು ಎಂದರು. ಅಭ್ಯರ್ಥಿ ಶಿವಕುಮಾರ ಉದಾಸಿ ಮಾತನಾಡಿ, ದೇಶಕ್ಕೆ ಸಮರ್ಥ ನಾಯಕತ್ವದ ಅವಶ್ಯವಿದ್ದು 60ಕ್ಕೂ ಹೆಚ್ಚು ವರ್ಷಗಳನ್ನು ಕಳೆದ ನಂತರವಾದರೂ ನಮಗೆ ಪ್ರಧಾನಿ ಯಾರಾಗಬೇಕು ಎಂಬ ಗಂಭೀರ ಚಿಂತನೆ ನಡೆದಿರುವುದಕ್ಕೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಬೇಜವಾಬ್ದಾರಿ ಆಡಳಿತವೇ ಕಾರಣವಾಗಿದೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳಕಪ್ಪ ಬಂಡಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಜಿಲ್ಲಾ ಮಾಜಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಸಣ್ಣೀರಪ್ಪ ಹಳ್ಳೆಪ್ಪನವರ ಮಾತನಾಡಿದರು. ಇದೇ ಸಂದರ್ಭದಲ್ಲಿ ಜೆಡಿಎಸ್, ಬಿಎಸ್ಆರ್ ಪಕ್ಷದ ಅನೇಕ ಕಾರ್ಯಕರ್ತರು ಮತ್ತು ಮೋಚಿ ಮಹಾಸಭಾ ರಾಜ್ಯ ಉಪಾಧ್ಯಕ್ಷ ರಾಮಚಂದ್ರ ಗಾರವಾಡ ಸೇರಿದಂತೆ ಅನೇಕರು ಶ್ರೀರಾಮುಲು ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಸಚಿವ ಸಿ.ಸಿ. ಪಾಟೀಲ, ಬಿಜೆಪಿ ಮಾಜಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ, ಹಾಲಿ ಅಧ್ಯಕ್ಷ ನಾಗರಾಜ ಕುಲಕರ್ಣಿ, ಜಿಪಂ ಅಧ್ಯಕ್ಷ ಸಜ್ಜನರ, ರಮೇಶ ಮುಂದಿನಮನಿ, ತಾಪಂ ಅಧ್ಯಕ್ಷ ತಾರೂಬಾಯಿ ಚವ್ಹಾಣ, ಬೀರಪ್ಪ ಬಂಡಿ, ರಂಗಪ್ಪ ಕ್ಯಾದಗಿಹಳ್ಳಿ, ಕಾಂತರಾಜ ಹಿರೇಮಠ, ಜಯಶ್ರೀ ಹಳ್ಳೆಪ್ಪನವರ, ದೇವಪ್ಪ ಕಂಬಳಿ, ಸೋಮಣ್ಣ ಚನ್ನಳ್ಳಿ, ಅಂದಪ್ಪ ಮೇಟಿ, ರಜನೀಕಾಂತ ದೇಸಾಯಿ, ಬಸವಂತಪ್ಪ ತಳವಾರ, ಬಿ.ಎ. ಹಳ್ಳಿಕೇರಿ, ಲಿಂಗನಗೌಡ ಹರ್ತಿ, ಸಿದ್ದನಗೌಡ ಪಾಟೀಲ, ನಿಂಗಬಸಪ್ಪ ಪ್ಯಾಟಿ, ಮಂಜುನಾಥ ಇಟಗಿ, ಸುರೇಶ ಮಾಳೆಕೊಪ್ಪ, ಶಂಕರಗೌಡ ಪಾಟೀಲ, ರೇಖಾ ದೇಸಾಯಿ, ಪರಶುರಾಮ ಕರಡಿಕೊಳ್ಳ, ಹೇಮಾವತಿ ಅಬ್ಬಿಗೇರಿ, ಪ್ರಭು ಅಬ್ಬಿಗೇರಿ, ಎಸ್.ವಿ. ಪಾಟೀಲ, ಆರ್.ಎಂ. ತಪ್ಪಡಿ, ದೇವಪ್ಪ ಇಟಗಿ, ಬಸವರಾಜ ಬಿಳಿಮಗ್ಗದ, ಈಶಪ್ಪ ಉಳ್ಳಾಗಡ್ಡಿ, ಸುಭಾಷ ಗುಡಿಮನಿ, ಕಾಂತರಾಜ ಹಿರೇಮಠ, ಮಂಜುನಾಥ ಕಾಗನೂರ, ಕುಮಾರಸ್ವಾಮಿ ಹಿರೇಮಠ ಸೇರಿದಂತೆ ಅನೇಕರು ಇದ್ದರು. ಹೇಮಗಿರೀಶ ಹಾವಿನಾಳ ಸ್ವಾಗತಿಸಿ, ಬಸವರಾಜ ಸಸಿಮಠ ನಿರೂಪಿಸಿ, ಶಿವು ನಾಡಗೌಡರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

