ಗದಗ

ಗುಂಪುಗಳ ನಡುವೆ ಘರ್ಷಣೆ; 6 ಜನರಿಗೆ ಗಾಯ

Published On :

ಯಾದಗಿರಿ:ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ 6 ಜನರಿಗೆ ಗಾಯವಾಗಿದೆ. ಈ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ನಗರದ ಗಂಜ್ ಪ್ರದೇಶದ ಬಳಿ ಶುಕ್ರವಾರ ಸಂಜೆ ಎರಡು ಗುಂಪುಗಳ ನಡುವೆ ನಡೆದ ಕಲ್ಲುತೂರಾಟ ಮತ್ತು ಮಾರಾಮಾರಿಯಲ್ಲಿ 6 ಜನರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಮೊದಲು ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ,  ನಂತರ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸತೀಸ್ರಡ್ಡಿ, ಅಮೀನರಡ್ಡಿ, ಮಲ್ಲನಗೌಡ, ಶರಣಬಸಪ್ಪ, ವಿಕ್ಕಿ ಮತ್ತು ರೋಹಿತರಡ್ಡಿ ಎನ್ನುವವರು ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮೂರು ಬೈಕ್ಗಳು ಜಖಂಗೊಂಡಿವೆ. ಕೂಡಲೆ ಯಾದಗಿರಿ ನಗರದ ಪೋಲಿಸರು ಸ್ಥಳಕ್ಕೆ ಧಾವಿಸಿ ನಾಲ್ಕು ಜನರನ್ನು ಬಂಧಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಯಾದಗಿರಿ ನಗರ  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

-

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.