ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಅಗತ್ಯ
ರೋಣ: ಲಕ್ಷಾಂತರ ಸಂಘಟಿತ ಮತ್ತು ಅಸಂಗಟಿತ ಕಾರ್ಮಿಕರಿಗೆ ಸರ್ಕಾರದಿಂದ ಸಾಮಾಜಿಕ ಭದ್ರತೆ ಅಗತ್ಯವಾಗಿದೆ ಎಂದು ಜಿಲ್ಲಾ ಕಾರ್ಮಿಕ ನಿರೀಕ್ಷಕ ಸಿದ್ದನಗೌಡ ಪಾಟೀಲ ಹೇಳಿದರು.
ಅವರು ಗುರವಾರ ಪಟ್ಟಣದ ಹಳೆ ಸಂತೆ ಬಜಾರ ಹತ್ತಿರದ ಆಝಾದ್ ಕಾಂಪ್ಲೆಕ್ಸ್ ಆವರಣದಲ್ಲಿ ತಾಲೂಕು ಕಟ್ಟಡ ಕಾರ್ಮಿಕರ ಸಂಘ, ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ನ್ಯಾಯವಾದಿಗಳ ಸಂಘ ಮತ್ತು ಸಹಾಯಕ ಸರ್ಕಾರಿ ಅಬಿಯೋಜಕರ ಇಲಾಖೆಗಳ ಆಶ್ರಯದಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕರಿಗಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಕಟ್ಟಡ ನಿರ್ಮಾಣ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸರ್ಕಾರ ಅನೇಕ ಸೌಲಭ್ಯ ಒದಗಿಸುತ್ತಿದೆ. ಅವುಗಳ ಲಾಭ ಪಡೆದುಕೊಳ್ಳಲು ಕಾರ್ಮಿಕರು ನೋಂದಾಯಿತರಾಗಬೇಕು. ನೋಂದಾಯಿತ ಪಲಾನುಭವಿಗಳು ಯಾವುದಾರರೂ ಅಪಘಾತಕ್ಕಿಡಾಗಿ ಮರಣ ಹೊಂದಿದಲ್ಲಿ ಅಥವಾ ಸಂಪೂರ್ಣ ಅಂಗವಿಕಲತೆ ಉಂಟಾದಲ್ಲಿ ವಿಮಾ ಮೊತ್ತವನ್ನು ಗರಿಷ್ಠ ರು. 2 ಲಕ್ಷ ವರೆಗೆ ನೀಡಲಾಗುವುದು ಎಂದರು. 43 ಅಸಂಘಟಿತ ವಲಯಗಳ ಕಾರ್ಮಿಕರನ್ನು ಮಂಡಳಿಯ ಅನುಷ್ಠಾನಗೊಳಿಸಿದ ಯೋಜನೆಗಳ ವ್ಯಾಪ್ತಿಗೆ ಸೇರಿಸಲಾಗಿದೆ. ಆದ್ದರಿಂದ ಈ ವಲಯದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರು ಸರ್ಕಾರ ವಿವಿಧ ಸೌಲಭ್ಯ ಪಡೆಯಬೇಕಾದಲ್ಲಿ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು. ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ ಉದ್ಘಾಟಿಸಿದರು. ಜಿ.ಆರ್. ಯಳವತ್ತಿ ಮುಂತಾದವರು ಮಾತನಾಡಿದರು. ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಪಾಂಡುರಂಗ ಮಾನ್ಪಡೆ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸದಸ್ಯ ಖಾದರಸಾಬ್ ಸಂಕನೂರ, ಎಲ್.ಎನ್. ಬಾಣದ, ಹಮಾಲರ ಸಂಘದ ಅಧ್ಯಕ್ಷ ಹನುಮಂತ ಹಲಗಿ, ಫಕ್ರುಸಾಬ್ ಕೋಲ್ಕಾರ, ನಜೀರಸಾಬ್ ಮುಲ್ಲಾ, ರಾಜೇಂದ್ರ ಉದ್ದಾರ, ರಾಜು ಗಡಾದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಮಂಜುನಾಥ ಹಾಳಕೇರಿ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

