ದೌರ್ಜನ್ಯ ತಡೆಗೆ ಕಠಿಣ ಕಾನೂನಿರಲಿ
ಗದಗ: ದೇಶಾದ್ಯಂತ ದಲಿತರ ಮೇಲೆ ಇಂದಿಗೂ ನಡೆಯುತ್ತಿರುವ ದೌರ್ಜನ್ಯಗಳ ತಡೆಗೆ ಅಗತ್ಯ, ಕಠಿಣ ಕಾನೂನುಗಳು ಅವಶ್ಯಕ ಎಂದು ನಗರಸಭೆ ಉಪಾಧ್ಯಕ್ಷ ಕೃಷ್ಣ ಪರಾಪುರ ಹೇಳಿದರು. ಅವರು ಗುರುವಾರ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣ ಸಮಿತಿಯಿಂದ ನಗರದ ನಗರಸಭೆ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತು ವ್ಯಾಪಕವಾಗಿ ಪ್ರಚಾರ ಮಾಡಿ ಪ್ರತಿ ಒಬ್ಬರಿಗೊ ಇದರ ತಿಳಿವಳಿಕೆ ಮೂಡಿಸುವ ಕಾರ್ಯ ಇಲಾಖೆಗಳು ನಡೆಸುವ ಅವಶ್ಯಕತೆ ಇದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ ಮಾತನಾಡಿ, ವಿವಿಧ ವಿಷಯಗಳು ಮತ್ತು ಕಾನೂನುಗಳ ಬಗ್ಗೆ ತಿಳಿಸಿದರು. ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ ಮಾನ್ವಿ, ಮಹಿಳಾ ಸಮಿತಿ ಅಧ್ಯಕ್ಷ ಉಮಾದೇವಿ ಕಾತರಕಿ, ತಿಪ್ಪವ್ವ ಮುಟಗಾರ, ಯಲಪ್ಪ ರಾಮಗಿರಿ, ಅಶೋಕ ಕುಸಬಿ, ಇಬ್ರಾಹಿಂ ಮುಲ್ಲಾ, ಆರತಿ ವೇದಿಕೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ದಲಿತ ಸಮುದಾಯಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಾಬಾ ರಾಮದೇವ್ ಹೇಳಿಕೆಯನ್ನು ಖಂಡಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಲಂ ಸಮಿತಿ ಪರುಶರಾಮ ಕಾಳೆ, ಬಸವರಾಜ ಬಿಳೆಯಲಿ, ಅಬುಬಕರ ಮಕಾಂದಾರ, ನಾಗರಾಜ ಮುಟಗಾರ, ಪರವೀನ ಬಡಿಗೇರ, ಮೆಹರುನಿಸ್ಸಾ ಢಾಲಾಯತ, ರಾಧಾ ಬೊಡಗಲ್ಲ, ಮುನ್ನಾ ಅಗಡಿ, ಹಾಗೂ ನಗರದ ವಿವಿಧ ಸ್ಲಂ ಪ್ರದೇಶಗಳ ನಿವಾಸಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

