ಗದಗ

ಬಸವಣ್ಣ ಸಾಮಾಜಿಕ ಕ್ರಾಂತಿ ಹರಿಕಾರ: ಪಂಡಿತ

Published On :

ರೋಣ: ಸಮಾಜದಲ್ಲಿನ ಮೌಢ್ಯತೆ, ಕಂದಾಚಾರಗಳನ್ನು ಹೋಗಲಾಡಿಸುವಲ್ಲಿ ಶ್ರಮಿಸಿದ ಜಗಜ್ಯೋತಿ ಬಸವೇಶ್ವರರ ಕಾಯಕ ತತ್ವ ಮತ್ತು ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ್ದಾರೆ. ಇವರ ವಚನಗಳಲ್ಲಿನ ಮೌಲ್ಯಗಳು, ತತ್ವಾದರ್ಶಗಳು ಎಂದೆಂದಿಗೂ ಅನನ್ಯವಾಗಿವೆ ಎಂದು ತಹಸೀಲ್ದಾರ್ ಎ.ಜಿ. ಪಂಡಿತ ಹೇಳಿದರು.
ಅವರು ಶುಕ್ರವಾರ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾ ಭವನದಲ್ಲಿ ತಾಲೂಕು ಆಡಳಿತ ವತಿಯಂದ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಅಂಗವಾಗಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿದರು. ಜಾತ್ಯತೀತ, ಸಾಮರಸ್ಯತ, ಕಾಯಕ ನಿಷ್ಠೆಯನ್ನ ಜನತೆಯ ಜೀವನದಲ್ಲಿ ಬಿತ್ತಿ ಬದುಕನ್ನು ಸುಂದರಗೊಳಿಸಿದ್ದಾರೆ. ಬಸವಣ್ಣನವರ ರಚಿಸಿದ ವಚನಗಳಲ್ಲಿ ಮಾನವೀಯ ಮೌಲ್ಯಗಳಿವೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಸಾರಸತ್ವವಿದೆ. ಅವರ ಕಾಯಕವೇ ಕೈಲಾಸ ಎಂಬ ಸಂದೇಶ ನಮಗೆಲ್ಲ ದಾರಿ ದೀಪವಾಗಿದೆ. ಶಿವ ಶರಣರಾಡಿದ ನುಡಿ ಅಮೃತಕ್ಕೆ ಸಮಾನವಾಗಿದೆ ಎಂದರು.  ಜಿಪಂ ಎಇಇ ಕೆ.ಎಲ್. ಕಟ್ಟಿಮನಿ ಮಾತನಾಡಿದರು. ತಾಪಂ ಇಒ ಎಸ್.ಎಂ. ಪಿಡಶೆಟ್ಟಿ, ಸಿಡಿಪಿಒ ಬಿ.ಎಸ್. ಮೋಕಾಶಿ, ಡಾ. ಹುಲಗಣ್ಣವರ, ಎನ್.ಆರ್. ಜೋಶಿ, ಮಹಾದೇವಿ ವಣಗೇರಿ, ಎಂ.ಬಿ. ಉಪ್ಪಾರ, ಆರ್.ಟಿ. ಕೊಪ್ಪದ, ಜಿ.ಯು. ದೊಡ್ಡಮನಿ, ರಮೇಶ ಗುಡಿಮುಂದಿನಮನಿ, ಗೋದಿಗನೂರ ಇದ್ದರು. ಉಪ ತಹಸೀಲ್ದಾರ್ ಎನ್.ಎಸ್. ಕೂಡಲ ವಂದಿಸಿದರು.
ಇಂದು ಶಂಕರರ ಜಯಂತಿ
ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೇ 4ರಂದು ಬೆಳಗ್ಗೆ 10.30ಕ್ಕೆ ಶಂಕರಾಚಾರ್ಯರ ಜಯಂತ್ಯುತ್ಸವವನ್ನು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಪ್ಪದೇ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಬನಶಂಕರಿ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.