ಗದಗ

ಅತಿಥಿ ಉಪನ್ಯಾಸಕರ ಮುಂದುವರಿಕೆಗೆ ಸರ್ಕಾರದ ಅಧಿಕೃತ ಆದೇಶ ಬಂದಿಲ್ಲ

Published On :

ಗದಗ: ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವ ಹಾಗೂ ವೇತನ ಹೆಚ್ಚಳ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿಲ್ಲ. ಆದರೆ, ಅತಿಥಿ ಉಪನ್ಯಾಸಕರ ಗಮನ ಸೆಳೆಯಲು ಕೆಲವರು ಪತ್ರಿಕೆಗೆ ಸುಳ್ಳು ಹೇಳಿಕೆ ನೀಡುತ್ತಿದ್ದು, ಇಂತಹ ತಪ್ಪು ಹೇಳಿಕೆಗೆ ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟ ತಿಳಿಸಿದೆ ಎಂದು ರಾಜ್ಯ ಉಪಾಧ್ಯಕ್ಷ ಹನುಮಂತಗೌಡ ಕಲ್ಮನಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅತಿಥಿ ಉಪನ್ಯಾಸಕರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಸಮಸ್ಯೆಗೆ ಸ್ಪಂದಿಸಿ, ಹೋರಾಟದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿ, ಸಲಹೆ, ಮಾರ್ಗದರ್ಶನವನ್ನು ನೀಡಲಿ. ಅತಿಥಿ ಉಪನ್ಯಾಸಕರ ಸಮಸ್ಯೆಗಳು ಏನು ಎಂಬುದು ಗೊತ್ತೇ ಇಲ್ಲದವರೂ ಈ ಬಗ್ಗೆ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ದಿನಕ್ಕೊಬ್ಬರಂತೆ ಅತಿಥಿ ಉಪನ್ಯಾಸಕರಲ್ಲಿ ಗೊಂದಲ ಸೃಷ್ಟಿಸುವ ಹೇಳಿಕೆಗೆ ಯಾರೂ ಕಿವಿಗೊಡಬಾರದು. ಪದವೀಧರರ ಚುನಾವಣೆ ಬಂದಂತಹ ಸಂದರ್ಭದಲ್ಲಿ ಈ ರೀತಿ ಪತ್ರಿಕೆಗಳ ಮೂಲಕ ಅತಿಥಿ ಉಪನ್ಯಾಸಕರನ್ನು ತಮ್ಮತ್ತ ಸೆಳೆದುಕೊಳ್ಳಬಹುದು ಹಾಗೂ ಕೇವಲ ಚುನಾವಣೆ ನಿಟ್ಟಿನಲ್ಲಿ ತಮ್ಮ ಸ್ವ ಹಿತಾಸಕ್ತಿಗೋಸ್ಕರ ಅತಿಥಿ ಉಪನ್ಯಾಸಕರನ್ನು ಗೊಂದಲದ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದರು.
--
ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಗದಗ: 6ರಿಂದ 16 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗದಗ ಬಾಲಕಿಯರ ಬಾಲಮಂದಿರದಲ್ಲಿ ಮೇ 7ರಿಂದ 17ರ ವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಉಚಿತ ಬೇಸಿಗೆ ಶಿಬಿರ ಹಮ್ಮಿಕೊಂಡಿದೆ.  25 ಹೆಣ್ಣು ಮಕ್ಕಳಿಗೆ ಅವಕಾಶವಿದ್ದು ಮೇ 7ರೊಳಗಾಗಿ ಬಾಲಕಿಯರ ಬಾಲಮಂದಿರ ಬೆಟಗೇರಿ-ಗದಗದಲ್ಲಿ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ 08372-246665, 08372-220711 ಇಲ್ಲಿಗೆ ಸಂಪರ್ಕಿಸುವಂತೆ ಗದಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.