ಗದಗ

ಅಕ್ರಮ ಮರಳು ಸಾಗಾಟ: 11 ಲಾರಿ ವಶ

Published On :

ಲಕ್ಷ್ಮೇಶ್ವರ: ಪಟ್ಟಣ ಮುಖಾಂತರವಾಗಿ ಹುಬ್ಬಳ್ಳಿಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 11 ಲಾರಿಗಳನ್ನು ಭಾನುವಾರ ಬೆಳಗಿನ ಜಾವದಲ್ಲಿ ತಹಸೀಲ್ದಾರ್ ಆರ್.ಬಿ. ನಿಂಗನಗೌಡರ ನೇತೃತ್ವದಲ್ಲಿ ದಾಳಿ ಮಾಡಿ ವಶಪಡಿಸಿಕೊಂಡ ಘಟನೆ ಜರುಗಿದೆ.
ಪ್ರತಿದಿನ ನೂರಾರು ಲಾರಿಗಳು ಅಕ್ರಮವಾಗಿ ತುಂಗಭದ್ರಾ ನದಿಯ ತಟದಿಂದ ಮರಳನ್ನು ಸಾಗಿಸುತಿದ್ದ ವಿಷಯ ತಿಳಿದ ತಾಲೂಕು ದಂಡಾಧಿಕಾರಿ ಆರ್.ಬಿ. ನಿಂಗನಗೌಡರ ನೇತೃತ್ವದಲ್ಲಿ ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ. ಶನಿವಾರ ರಾತ್ರಿ ಹಾಗೂ ಭಾನುವಾರ ಬೆಳಗಿನ ಜಾವದಲ್ಲಿ ದಾಳಿ ಮಾಡಿದ ತಂಡ ಸುಮಾರು 11 ಲಾರಿಗಳನ್ನು ವಶಪಡಿಸಿಕೊಂಡು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಲಾರಿ ನಿಲ್ಲಿಸಲಾಗಿದೆ. ಈಚೆಗೆ ಜಿಲ್ಲಾಧಿಕಾರಿಗಳು ಅಕ್ರಮವಾಗಿ ಮರಳು ಸಾಗಿಸುವವರ ಹಾಗೂ ರಾತ್ರಿ ವೇಳೆಯಲ್ಲಿ ಮರಳನ್ನು ಸಾಗಿಸುವುದು ಅಕ್ರಮವೆಂದು ಘೋಷಣೆ ಮಾಡಿದ್ದಾರೆ. ಅಲ್ಲದೆ, ಯಾವುದೇ ಪರವಾನಗಿ ಹೊಂದಿರದೇ ಅಕ್ರಮವಾಗಿ ಮರಳು ಸಾಗಾಣೆ ಮಾಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶ ಮಾಡಿದ್ದರೂ, ಜಿಲ್ಲಾಧಿಕಾರಿಗಳ ಆದೇಶಕ್ಕೆ ಕಿಮ್ಮತ್ತು ದೊರಕದಿರುವುದು ವಿಷಾದದ ಸಂಗತಿಯಾಗಿದೆ.
--
ಸಚಿವರಿಂದ ಪತ್ರಕರ್ತನಿಗೆ ಪ್ರಾಣಬೆದರಿಕೆ: ಖಂಡನೆ
ಗಜೇಂದ್ರಗಡ: ನಿಡ್ಡೋಡಿ ಉಷ್ಣ ವಿದ್ಯುತ್ ಸ್ಥಾವರ ವಿವಾದ ಕುರಿತು ವಸ್ತುನಿಷ್ಠ ವರದಿ ಮಾಡಿದ ಮೂಡಬಿದರೆ ಪತ್ರಕರ್ತ ಯಶೋಧರ ಬಂಗೇರ ಅವರಿಗೆ ಯುವಜನ ಸೇವಾ ಕ್ರೀಡಾ ಹಾಗೂ ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್ ಪ್ರಾಣ ಬೆದರಿಕೆ ಹಾಕಿರುವುದನ್ನು ಗದಗ ಜಿಲ್ಲೆಯ ರೋಣ ತಾಲೂಕು ಪತ್ರಕರ್ತರ ಸಂಘ ಖಂಡಿಸಿದೆ. ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ರಾಘವೇಂದ್ರ ಕುಲಕರ್ಣಿ ಮಾತನಾಡಿ, ಸಂವಿಧಾನದ 4ನೇ ಪ್ರಮುಖ ಅಂಗವಾಗಿರುವ ಪತ್ರಿಕೋದ್ಯಮ ಸಮಾಜದಲ್ಲಿ ತನ್ನದೇ ಆದ ಪ್ರಮುಖ ಜವಾಬ್ದಾರಿಕೆ ಹೊಂದಿದೆ. ಕಾರ್ಯನಿರತ ಪತ್ರಕರ್ತರಿಗೆ ವಸ್ತುನಿಷ್ಠ ವರದಿಗಾರಿಕೆ ಮಾಡುವಲ್ಲಿ ಹಲವಾರು ಅಡೆತಡೆಗಳುಂಟಾಗಿ ಭಯದ ವಾತಾವರಣದಲ್ಲಿ ಕಾರ್ಯನಿರ್ವಹಿಸುವಂತಾಗುತ್ತದೆ. ಕೂಡಲೇ ಸರ್ಕಾರ ಎಚ್ಚೆತ್ತು ಇಂತಹ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಕಾರ್ಯನಿರತ ಪತ್ರಕರ್ತರಿಗೆ ಸೂಕ್ತ ಭದ್ರತೆ ನೀಡಲು ಮುಂದಾಗದಿದ್ದರೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದರು. ಡಿ.ಜಿ. ಮೋಮಿನ್, ಘಟನೆ ನಡೆಯುತ್ತಿರುವುದು ವಿಷಾದನೀಯ ಎಂದರು. ಮಂಜುನಾಥ ರಾಠೋಡ, ಎಸ್.ಎಂ. ಸೈಯ್ಯದ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.