ಗದಗ

ಕಾರ್ಮಿಕರ ಆದಾಯ ಹೆಚ್ಚಾದರೆ ದೇಶ ಅಭಿವೃದ್ದಿ

Published On :

ಗದಗ: ಕೃಷಿ ಕೂಲಿಕಾರರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಆದಾಯ ಹೆಚ್ಚಾಗದೇ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿ ಹೇಳಿದರು.
ಅವರು ಇತ್ತೀಚೆಗೆ ನಗರದಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆಗಳ ಏರ್ಪಡಿಸಿದ ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಮಾತನಾಡಿದರು.
ಶ್ರೀಮಂತರೇ ಶ್ರೀಮಂತರಾಗುವುದರಿಂದ ದೇಶದ ಅಭಿವೃದ್ಧಿ ಆಗವುದಿಲ್ಲ. ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಹುತಾತ್ಮರನ್ನು ಸ್ಮರಿಸುವ ಮೇ ದಿನದಂದು ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಸಂಘಟನೆ, ಹೋರಾಟಗಳನ್ನು ಬಲಿಷ್ಠಗೊಳಿಸುವ ದೃಢ ಸಂಕಲ್ಪ ಮಾಡಬೇಕು ಅಂದರು.
ಜಿಲ್ಲಾ ಸಮಿತಿ ಅಧ್ಯಕ್ಷ ಮಹೇಶ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಆರಂಭದಲ್ಲಿ ಪೀರು ರಾಠೋಡ ಮತ್ತು ಸಂಗಡಿಗರು ಹೋರಾಟದ ಹಾಡುಗಳನ್ನು ಹಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಚಿಟಗಿ ಸ್ವಾಗತಿಸಿದರು. ಕಾರ್ಮಿಕ ಮುಖಂಡ ಬಿ.ಎಸ್. ಸೊಪ್ಪಿನ, ವಿಮಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಜಿ.ಎಸ್. ತಳವಾರ, ಗ್ರಾಪಂ ನೌಕರರ ಸಂಘದ ಮುಖಂಡ ಬಸವರಾಜ ಜಂಕಮ್ಮನವರ ಬಿಸಿಯೂಟ ನೌಕರರ ಸಂಘದ ಪುಷ್ಪಾ ಚವ್ಹಾಣ,  ಹೊರಗುತ್ತಿಗೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪೀರು ರಾಠೋಡ, ಹಮಾಲಿ ಕಾರ್ಮಿಕರ ಸಂಘದ ಗೋವಿಂದಪ್ಪ ಸರಸುರಿ ಮಾತನಾಡಿದರು. ಬೆಳವಣಕಿ ಗ್ರಾಪಂ ಸದಸ್ಯ ಮಹಾಗುಂಡಪ್ಪ ಅಂಗಡಿ, ಬಸವರಾಜ ಮಂತೂರ, ಕಟ್ಟಡ ಕಾರ್ಮಿಕರ ಸಂಘದ ಟಿ.ವಿ. ಪಾಟೀಲ ಇದ್ದರು. ಗೌಸ ಪೀರಣ್ಣವರ ನಿರ್ವಹಿಸಿದರು. ಬಾಲು ರಾಠೋಡ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.