ಗದಗ

ಬಸವಣ್ಣನವರ ಆದರ್ಶ ಅಳವಡಿಸಿಕೊಳ್ಳಿ

Published On :

ಕನ್ನಡಪ್ರಭ ವಾರ್ತೆ, ನರಗುಂದ, ಮೇ 4
ಸರ್ವ ಜನಾಂಗದವರು ಒಂದೇ ಎನ್ನುವ ತತ್ವವನ್ನು ಜಗತ್ತಿಗೆ ಸಾರಿದ ವಿಶ್ವಗುರು ಬಸವಣ್ಣನವರ ತತ್ವ ಇಂದಿನ ಯುವ ಜನಾಂಗ ಅಳವಡಿಸಿಕೊಳ್ಳಬೇಕು ಎಂದು ಲಯನ್ಸ್ ಆಂಗ್ಲ ಮಾಧ್ಯಮ ಕಾಲೇಜಿನ ಉಪನ್ಯಾಸಕ ಶಿವಾನಂದ ಜೋಗಿ ಹೇಳಿದರು.
ಅವರು ಈಚೆಗೆ ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಬಸವ ಜಯಂತಿ ನಿಮಿತ್ತ ಓರ್ಪಡಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ ಇತಹಾಸದಲ್ಲಿ ಮೇಲು ಕೀಳು ಎಂಬ ಭೇದಭಾವ ಹೊರಗೆ ಹಾಕಬೇಕು. ನಮಗೆ ಸ್ವಾತಂತ್ರ್ಯ ದೊರೆತು 65 ವರ್ಷಕ್ಕಿಂತ ಹೆಚ್ಚಿನ ವರ್ಷ ಕಳೆದರೂ ಸಮಾಜದಲ್ಲಿ ಮೇಲು ಕೀಳು ಎಂಬ ಭಾವನೆ ಇನ್ನೂ ಕಡಿಮೆಯಾಗಿಲ್ಲ. ಆದರೆ, 12ನೇ ಶತಮಾನದಲ್ಲಿ ಮಹಾ ಶಿವಶರಣ ಬಸವಣ್ಣನವರು ಮೇಲು ಕೀಳು ಎಂಬುದನ್ನು ಸಮಾಜದಿಂದ ಕಿತ್ತು ಎಸೆಯಬೇಕೆಂದು ಸಾವಿರಾರು ವಚನಗಳನ್ನು ರಚಿಸಿ ಅವುಗಳನ್ನು ಶಿವಶರಣರ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದರು. ಕಾರ್ಯಕ್ರಮದ ಪೂರ್ವದಲ್ಲಿ ಬಸವೇಶ್ವರ ಮೂರ್ತಿಯನ್ನು ಪಟ್ಟಣದಾದ್ಯಂತ ಮೆರವಣಿಗೆ ಜರುಗಿಸಲಾಯಿತು. ಶಾಸಕ ಬಿ.ಆರ್. ಯಾವಗಲ್, ಸಿ.ಎಚ್. ಕೋರಿ, ತಾಪಂ ಸದಸ್ಯ ವಿ.ಎನ್. ಕೊಳ್ಳಿಯವರ, ಸಿ.ಜಿ. ಕೋರಿ, ಎಸ್.ಎಸ್. ವಾಳದ, ಎಫ್.ಆರ್. ಪಾಟೀಲ, ಚನ್ನಬಸಪ್ಪ ಹೊಸಗಾಣಿಗೇರ, ಎಸ್.ವೈ. ಹುಂಬಿ, ಚನ್ನು ನಂದಿ, ರಾಜು ಕಲಾಲ, ಜಗದೀಶ ರಾಯನಗೌಡ್ರ, ಬಸಣ್ಣ ಗೋವೇಶ್ವರ, ರವಿ ಬ್ಯಾಹಟ್ಟಿ, ಉಪಾಸಿ, ಮುಂತಾದವರು ಉಪಸ್ಥಿತರಿದ್ದರು. ಚನ್ನಪ್ಪ ಕಂಠಿ ಸ್ವಾಗತಿಸಿ, ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.