ಗದಗ

ದೂರು ಸ್ವೀಕರಿಸಿದ 8 ತಾಸೊಳಗೆ ನೀರು: ಎಚ್ಕೆ

Published On :

ಬಳ್ಳಾರಿ: ಬೇಸಿಗೆ ದಿನಗಳಲ್ಲಿ ರಾಜ್ಯದ ಯಾವುದೇ ಗ್ರಾಮಗಳಲ್ಲಿ ಕುಡಿವ ನೀರಿನ ತೊಂದರೆ ಉಂಟಾಗದಂತೆ ಎಲ್ಲ ತಾಪಂ ಇಒಗಳಿಗೆ ಹೆಚ್ಚಿನ ಅಧಿಕಾರ ನೀಡಿದ್ದು, ನೀರು ಕುರಿತಂತೆ ದೂರುಗಳನ್ನು ಸ್ವೀಕರಿಸಿದ 2 ಗಂಟೆಯೊಳಗೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚಿಸಿ 8 ತಾಸಿನೊಳಗೆ ಪರಿಹಾರ ಕ್ರಮಕೈಗೊಳ್ಳಬೇಕು ಎಂದು ಸಚಿವ ಎಚ್.ಕೆ. ಪಾಟೀಲ್ ಸೂಚಿಸಿದ್ದಾರೆ.
ಗ್ರಾಮೀಣ ಭಾಗದ ಕುಡಿವ ನೀರಿಗೆ ಸಂಬಂಧಿಸಿ ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಿಪಂ ಸಿಇಒಗಳ ಬದಲಿಗೆ ತಾಪಂ ಇಒಗಳಿಗೆ ಈಗ ವಿಶೇಷ ಅಧಿಕಾರ ನೀಡಲಾಗಿದ್ದು, ತಾಲೂಕು ಮಟ್ಟದಲ್ಲಿ ಅವರು ನೋಡಲ್ ಅಧಿಕಾರಿಗಳಾದಿ, ಸಮಸ್ಯೆ ಪರಿಹರಿಸುವ ಜವಾಬ್ದಾರಿ ಹೊಂದಿರುತ್ತಾರೆ. ಜಿಪಂ ಮಟ್ಟದಲ್ಲಿ ಯೋಜನಾ ನಿರ್ದೇಶಕರು, ಜಿಪಂ ಉಪ ಕಾರ್ಯದರ್ಶಿಗಳು ಜವಾಬ್ದಾರಿ ವಹಿಸಲಿದ್ದು, ಜಿಪಂ ಸಿಇಒ ಇದರ ಮೇಲ್ವಿಚಾರಣೆ ಮಾಡಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ತೆರೆದಿದ್ದು, ನೀರು, ಇತರೆ ಸಮಸ್ಯೆಗಳ ಬಗ್ಗೆ 1800425666ಗೆ ಉಚಿತ ಕರೆ ಮಾಡಿ ದೂರು, ಮಾಹಿತಿ, ವಿನಂತಿ ನೋಂದಣಿ ಮಾಡಿಸಿ ಎಂದರು.
ಬರುವ ದೂರುಗಳನ್ನು ಸ್ವೀಕರಿಸಿ, ಬೋರ್‌ವೆಲ್ ಕೊರೆಸುವ, ಇರುವ ಬೋರ್‌ವೆಲ್‌ಗಳನ್ನು ಪುನರುಜ್ಜೀವನಗೊಳಿಸುವ ಕುರಿತು 2 ತಾಸಿನೊಳಗೆ ನಿರ್ಣಯ ಕೈಗೊಂಡು, 8 ತಾಸಿನೊಳಗೆ ಅನುಷ್ಠಾನ ಮಾಡಬೇಕು. ಇದು ಸಾಧ್ಯವಾಗದಿದ್ದಲ್ಲಿ ಟ್ಯಾಂಕರ್ ಮೂಲಕ ಕುಡಿವ ನೀರು ಸರಬರಾಜು ಮಾಡಬೇಕು. ಇಲ್ಲದಿದ್ದಲ್ಲಿ ಇಒಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಾಕೀತು ಮಾಡಿದರು.
ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್, ಸಂಡೂರು ಶಾಸಕ ಈ. ತುಕಾರಾಂ, ಜಿಪಂ ಸಿಇಒ ಮಹಮ್ಮದ್ ಸಲಾವುದ್ದೀನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.