ಮೇವಿನ ಕೊರತೆ ಇಲ್ಲ
ಕನ್ನಡಪ್ರಭ ವಾರ್ತೆ, ಗದಗ, ಮೇ 6
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಂ. ಮದನಗೋಪಾಲ್ ಮಂಗಳವಾರ ಜಿಪಂ ಸಭಾಭವನದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಸಾಕಷ್ಟು ಮೇವಿನ ಲಭ್ಯತೆ ಇದ್ದು, ಮುಂದಿನ 23 ವಾರಗಳ ವರೆಗೆ ಸಾಕಾಗುವಷ್ಟು ಮೇವು ಲಭ್ಯವಿದೆ ಎಂದು ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಸಭೆಗೆ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಮೇವಿನ ಕೊರತೆಯಾದಲ್ಲಿ ಜಿಲ್ಲೆಯ ಸಾಮಾಜಿಕ ಹಾಗೂ ಪ್ರಾದೇಶಿಕ ಅರಣ್ಯ ಇಲಾಖೆಯ ಕ್ಷೇತ್ರದಲ್ಲಿ ಬೆಳೆಯಲಾಗುವ ಮೇವು ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಜನರಿಗೆ ಕುಡಿವ ನೀರನ್ನು ಪೂರೈಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, ಕಾರಣಕ್ಕೂ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಜನವರಿ 2014 ರಿಂದ ಮೇ 5ರ ವರೆಗೆ 111.8 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈಗ ಕೇವಲ 53.3 ಮಿ.ಮೀ. ಮಾತ್ರ ಮಳೆಯಾಗಿದ್ದು ಅದರಲ್ಲೂ ರೋಣ, ಹಾಗೂ ನರಗುಂದ ತಾಲೂಕುಗಳಲ್ಲಿ ಮಳೆಯ ತೀವ್ರ ಕೊರತೆಯಾಗಿದೆ. ಮುಂಗಾರು ಬಿತ್ತನೆಗಾಗಿ ಕೃಷಿ ಭೂಮಿಯನ್ನು ಹದಗೊಳಿಸುವ ಕಾರ್ಯದಲ್ಲಿ ರೈತರು ನಿರತರಾಗಿದ್ದಾರೆ. ಮುಂಗಾರು ಬಿತ್ತನೆಗೆ ಅವಶ್ಯವಿರುವ ಎಲ್ಲ ಬೀಜಗಳ ಮುಂಗಡ ದಾಸ್ತಾನಿಗಾಗಿ ಇಲಾಖೆಯಿಂದ ಬೇಡಿಕೆ ಸಲ್ಲಿಸಲಾಗಿದೆ. ಅವಶ್ಯವಿರುವ ರಸಗೊಬ್ಬರದ ದಾಸ್ತಾನು ಮಾಡಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಬರಗಾಲ ಕಾಮಗಾರಿ ಪ್ರಗತಿ, ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬರಗಾಲ ಕಾಮಗಾರಿ, ಕೊಳವೆ ಬಾವಿಗಳ ವಿದ್ಯುದ್ದೀಕರಣ, ಬೆಳೆ ಹಾನಿ ಪರಿಹಾರ ವಿತರಣೆ, ಅಂಬೇಡ್ಕರ್ ಭವನ ಕಾಮಗಾರಿ, ವಿವಿಧ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ್, ತಹಸೀಲ್ದಾರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಪಂ ಸಿಇಓ ವೀರಣ್ಣ ತುರಮರಿ ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಗದ್ಯಾಳ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

