ಗದಗ

ಬಾಲ್ಯ ವಿವಾಹ ತಡೆಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯ

Published On :

ಕನ್ನಡಪ್ರಭ ವಾರ್ತೆ, ಗದಗ, ಮೇ 7
ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸ್ ಇಲಾಖೆಯ ಜತೆಗೆ ವಿವಿಧ ಇಲಾಖೆಯ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಹೇಳಿದರು.
ಅವರು ಬುಧವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲ್ಯ ವಿವಾಹ ತಡೆಗೆ ಗ್ರಾಮೀಣ ಮಟ್ಟದಲ್ಲಿ ಕಮಿಟಿಗಳನ್ನು ಮಾಡಬೇಕು. ಬಾಲ್ಯ ವಿವಾಹ ಮಾಡುವವರಿಗೆ ಸರ್ಕಾರದಿಂದ ದೊರಕುವ ಎಲ್ಲ  ಸೌಲಭ್ಯ ರದ್ದುಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಇದು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು. ಬಾಲ್ಯ ವಿವಾಹ ನಿಷೇಧ ಕುರಿತು ಬೀದಿ ನಾಟಕ, ಶಾಲಾ ಮಟ್ಟದಲ್ಲಿ ಮತ್ತು ಜ್ಯೂನಿಯರ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಜತೆಗೆ ಪಾಲಕರ ಸಭೆಗಳನ್ನು ಏರ್ಪಡಿಸಿ ಈ ಕುರಿತು ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹದ ದುಷ್ಪರಿಣಾಮ ಕುರಿತು ವಿಶೇಷ ಲೇಖನಗಳನ್ನು ಬರೆದು ಪತ್ರಿಕೆಗಳಲ್ಲಿ ಪ್ರಕಟಿಸುವುದು, ಜಾತ್ರೆ ಮತ್ತು ಸಂತೆಗಳು ಇದ್ದ ಸಂದರ್ಭದಲ್ಲಿ ಪೋಸ್ಟರ್, ಬ್ಯಾನರ್ ಅಳವಡಿಸಿ ಹೆಚ್ಚಿನ ಪ್ರಚಾರ ಮಾಡಬೇಕು ಎಂದರು.
ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧಿಸಲು ಕೈಕೊಳ್ಳಬೇಕಾದ ಪರಿಣಾಮಕಾರಿ ಕ್ರಮಗಳ ಕುರಿತು ಚರ್ಚಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಚ್.ಎಸ್. ಪರಮೇಶ್ವರಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭಾರತಿ ಯಲಿಶೆಟ್ಟರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅಕ್ಕಮಹಾದೇವಿ, ಕೆ.ಎಚ್. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು,   ಎನ್‌ಜಿಒಗಳು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.