ಗದಗ

ಶುದ್ಧ ನೀರಿನ ಘಟಕ ಸ್ಥಾಪಿಸಲು ಆಗ್ರಹ

Published On :

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಶುದ್ಧ ಕುಡಿವ ನೀರು ದೊರೆಯದೇ ಇರುವುದರಿಂದ ಬಹಳಷ್ಟು ಜನರು ಫ್ಲೋರೈಡ್ಯುಕ್ತ ನೀರನ್ನು ಬಳಸುತ್ತಾರೆ. ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಪುರಸಭೆ ಆಡಳಿತ ಮಂಡಳಿಯು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಮುಂದಾಗಬೇಕು ಎಂದು ಪುಲಿಗೇರೆ ಪರಿಸರ ಸ್ನೇಹಿ ಬಳಗದ ಅಧ್ಯಕ್ಷ ಬಾಬು ಅಳವಂಡಿ ಆಗ್ರಹಿಸಿದ್ದಾರೆ.
ಈ ಕುರಿತು ಮಂಗಳವಾರ ಪುರಸಭೆಯ ಅಧ್ಯಕ್ಷರಿಗೆ ಮನವಿ ನೀಡಿ, ಪಟ್ಟಣಕ್ಕೆ ಪ್ರತಿದಿನ ಸಾವಿರಾರು ಜನರು ಉದ್ಯೋಗಕ್ಕಾಗಿ, ವ್ಯಾಪಾರಕ್ಕಾಗಿ ಹಾಗೂ ಇನ್ನಿತರ ಕಚೇರಿಗಳ ಕೆಲಸಕ್ಕಾಗಿ ಬರುತ್ತಾರೆ. ಅಲ್ಲದೇ ಪಟ್ಟಣದಲ್ಲಿ ಸುಮಾರು 45 ಸಾವಿರ ಜನಸಂಖ್ಯೆ ಹೊಂದಿದ್ದು, ಹೀಗಾಗಿ ಇಲ್ಲಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಈಗ ಪಟ್ಟಣಕ್ಕೆ ಪೂರೈಕೆಯಾಗುತ್ತಿರುವ ತುಂಗಭದ್ರಾ ನದಿಯ ನೀರು ಬೇಸಿಗೆಯ ಕಾಲದಲ್ಲಿ ಸಾಕಷ್ಟು ಗಲೀಜಿನಿಂದ ಕೂಡಿರುತ್ತದೆ. ನದಿಯ ನೀರನ್ನು ಅಷ್ಟೊಂದು ವ್ಯವಸ್ಥಿತವಾಗಿ ಶುದ್ಧೀಕರಣವಾಗುತ್ತಿಲ್ಲ. ಅದಕ್ಕಾಗಿ ಪಟ್ಟಣದಲ್ಲಿ ದೂದನಾನಾ ದರ್ಗಾ, ಹಾವಳಿ ಹನುಮಪ್ಪನ ದೇವಸ್ಥಾನದ ಹತ್ತಿರ, ಹಳ್ಳದಕೇರಿ ಓಣಿಯಲ್ಲಿ, ಮಾನ್ವಿ ಪೆಟ್ರೋಲ್ ಬಂಕ್ ಹತ್ತಿರ, ಜೋಡು ಮಾರುತಿ ದೇವಸ್ಥಾನದ ಹತ್ತಿರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡುವುದರಿಂದ ಜನರಿಗೆ ಸರಿಯಾದ ರೀತಿಯಲ್ಲಿ ಶುದ್ಧ ಕುಡಿಯುವ ನೀರು ದೊರಕುವಂತೆ ಮಾಡಬಹುದಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.


--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.