ಸುಪ್ರೀಂ ತೀರ್ಪು ಕನ್ನಡಕ್ಕೆ ಆಘಾತಕಾರಿ: ತೋಂಟದ ಶ್ರೀ
ಗದಗ: ಕನ್ನಡ ಮಾಧ್ಯಮ ಶಿಕ್ಷಣ ಕಡ್ಡಾಯವಲ್ಲ ಎಂಬ ಸುಪ್ರೀಂಕೋರ್ಟ್ ತೀರ್ಪು ಕನ್ನಡ ಭಾಷೆ, ಸಂಸ್ಕೃತಿ ಬೆಳವಣಿಗೆಗೆ ಆಘಾತಕಾರಿ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ತಕ್ಷಣ ಕನ್ನಡ ಭಾಷೆ ಶಿಕ್ಷಣ ಉಳಿದು ಬೆಳೆದು ಬರಲು ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು. ಈ ಕುರಿತು ಕಾನೂನು ತಜ್ಞರು, ಸಾಹಿತಿಗಳ ಸಲಹೆ ಪಡೆಯಬೇಕು ಎಂದು ಜ. ತೋಂಟದ ಡಾ ಸಿದ್ಧಲಿಂಗ ಶ್ರೀಗಳು ಅಭಿಪ್ರಾಯ ಪಟ್ಟಿದ್ದಾರೆ.
ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲೇ ಶಿಕ್ಷಣ ಕೊಡುವ ಅಗತ್ಯವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡುವಲ್ಲಿ ಎಲ್ಲಿ ಎಡವಿದ್ದೇವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯ ಸರ್ಕಾರದ ಕನ್ನಡಪರ ಅಧಿಸೂಚನೆ ರದ್ದು, ಕರ್ನಾಟಕದಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂದು ತೀರ್ಪು ನೀಡಿರುವುದು ಕನ್ನಡ, ಇತರೆ ಭಾಷೆ ಸಂಸ್ಕೃತಿಗೂ ಧಕ್ಕೆ ತರುತ್ತದೆ. ಕನ್ನಡದ ಉಳಿವಿಗಾಗಿ ಜನರೇ ಸ್ವಯಂಪ್ರೇರಣೆಯಿಂದ ಪಣ ತೊಟ್ಟು ನಡೆಯುವ ವಾತಾವರಣವನ್ನಾದರೂ ಸರ್ಕಾರ ಮೂಡಿಸಲಿ. ಪ್ರಾಥಮಿಕ ಹಂತದಲ್ಲಿ ಮಾತೃ ಭಾಷಾ ಶಿಕ್ಷಣವೇ ಮುಂದಿನ ಉತ್ಕೃಷ್ಟ ಸಾಧನೆಗೆ ದಾರಿ ಎಂಬುದು ರುಜುವಾತಾಗಿದೆ. ಅದನ್ನು ಇನ್ನಷ್ಟು ಪ್ರಚುರಪಡಿಸಲು ಸಂಘ ಸಂಸ್ಥೆಗಳು ಮುಂದಾಗಬೇಕಿದೆ ಶ್ರೀಗಳು ಪತ್ರಿಕಾ ಪ್ರಕಟಣೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

