ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ
ಗದಗ: ಆರ್ಥಿಕವಾಗಿ ಹಿಂದುಳಿದ ಹಾಗೂ ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಬಡ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲು ಸ್ಥಳೀಯ ಯಂಗ್ ಇಂಡಿಯಾ ಸಮಿತಿ ನಿರ್ಧರಿಸಿದೆ ಎಂದು ಯಂಗ್ ಇಂಡಿಯಾ ಸಂಸ್ಥಾಪಕ ಅಧ್ಯಕ್ಷ ವೆಂಕನಗೌಡ ಗೋವಿಂದಗೌಡ್ರ ಹೇಳಿದರು.
ಅವರು ಗುರುವಾರ ನಗರದ ಯಂಗ್ ಇಂಡಿಯಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 4 ವರ್ಷಗಳಿಂದ ಪ್ರತಿವರ್ಷ ಎಸ್ಎಸ್ಎಲ್ಸಿ ವರೆಗಿನ 10ಬಡ ವಿದ್ಯಾರ್ಥಿಗಳ ದತ್ತು ಪಡೆಯುವ ಮೂಲಕ ಯಂಗ್ ಇಂಡಿಯಾ ಪರಿವಾರ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ನಿರಂತರವಾಗಿ ಜರುಗಿಸುತ್ತಿದೆ. ಪ್ರತಿವರ್ಷ ಶೈಕ್ಷಣಿಕ ವರ್ಷಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಿಸುತ್ತಿದ್ದು, ಈ ಬಾರಿ ಜೂನ್ ಮೊದಲ ವಾರದಲ್ಲಿ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ ಕಾರ್ಯ ಜರುಗಲಿದೆ. ಅವಶ್ಯಕತೆ ಉಳ್ಳವರಿಗಿಂತ ಅನಾವಶ್ಯಕ ವಿದ್ಯಾರ್ಥಿಗಳು ನೋಟ್ಬುಕ್ ಪಡೆದುಕೊಳ್ಳುತ್ತಿರುವುದು ಸಮಿತಿಯ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿ ಅವಶ್ಯಕತೆಯುಳ್ಳವರು ಮೇ 25ರ ವರೆಗೆ ಸಂಘದ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಅಥವಾ 9620573777, 9448165660ಗೆ ಸಂಪರ್ಕಿಸಬಹುದಾಗಿದೆ. 10ನೇ ತರಗತಿಯ ವರೆಗೂ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳನ್ನು ಪರಿಗಣಿಸಲಾಗುವುದು. ನಮ್ಮ ಕಾರ್ಯ ಕ್ಕೆ ಜನರು ಕೈಗೂಡಿಸಿದಲ್ಲಿ ಇನ್ನಷ್ಟು ಹೆಚ್ಚಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಹಾಯ ಮಾಡಲು ಸಾಧ್ಯವಿದ್ದು, ಈ ಕಾರ್ಯಕ್ಕೆ ಮುಕ್ತ ಮನಸ್ಸಿನಿಂದ ಕೈಜೋಡಿಸುವ ಸಂಘಟನೆಗಳನ್ನು ಸ್ವಾಗತಿಸುವುದಾಗಿ ಹೇಳಿದರು. ಲಕ್ಷ್ಮಣ ದೊಡ್ಡಮನಿ, ವಿಜಯ ಕಲ್ಮನಿ, ಹನಮಂತ ಗೆಜ್ಜಳ್ಳಿ, ಚಂದ್ರು ಮುಂಡರಗಿ, ಸುರೇಶ ಪನ್ನೂರ, ಕೊಟ್ರೇಶ, ಮಂಜುನಾಥ ಅಗಸಿಮನಿ ಸುದ್ದಿಗೋಷ್ಠಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

