ಗದಗ

ಸ್ಪರ್ಧಿಸುವ ಮನಸ್ಸಿದೆ, ಅಭಿಪ್ರಾಯ ಸಂಗ್ರಹಕ್ಕೆ ಬಂದಿದ್ದೇನೆ: ವಸಂತ ಹೊರಟ್ಟಿ

Published On :

ಗದಗ: ನನ್ನೆಲ್ಲ ಸ್ನೇಹಿತರ, ಹಿತೈಷಿಗಳ ಪ್ರೀತಿ ಪೂರ್ವಕ ಒತ್ತಾಯಕ್ಕೆ ಮಣಿದು ನಾನು ಮುಂಬರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ನಿಲ್ಲಲು ಬಯಸಿದ್ದೇನೆ. ನೀವೆಲ್ಲರೂ ಆಶೀರ್ವಾದ ಮಾಡುವಿರೆಂಬ ವಿಶ್ವಾಸ ನನಗಿದೆ ಎಂದು ಆಕ್ಸ್‌ಫರ್ಡ್ ವಿದ್ಯಾ ಸಂಸ್ಥೆ ಅಧ್ಯಕ್ಷ ವಸಂತ ಹೊರಟ್ಟಿ ಹೇಳಿದರು.
ಅವರು ಶನಿವಾರ ನಗರದ ವಿದ್ಯಾದಾನ ಸಮಿತಿ ಪ್ರೌಢಶಾಲೆಯ ಸಭಾಭವನದಲ್ಲಿ ಜರುಗಿದ ಅಭಿಮಾನಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ನ್ಯೂಜಿಲ್ಯಾಂಡಿನಲ್ಲಿ ಶಿಕ್ಷಣ ಪಡೆದಿರುವ ನನಗೆ ಶಿಕ್ಷಣ ಕ್ಷೇತ್ರದ ಬಗ್ಗೆ, ಯುವಕರ ಸಮಸ್ಯೆಗಳ ಬಗ್ಗೆ ಚೆನ್ನಾಗಿ ಗೊತ್ತು. ಅವುಗಳಿಗೆ ಹೇಗೆ ಪರಿಹಾರಗಳನ್ನು ನೀಡಬೇಕೆಂಬುದೂ ನನಗೆ ತಿಳಿದಿದೆ. ಆ ಹಿನ್ನೆಲೆಯಲ್ಲಿ ಈ ಚುನಾವಣೆಯನ್ನು ಎದುರಿಸಲು ನಾನು ಸನ್ನದ್ಧನಾಗಿದ್ದೇನೆ. ನನ್ನ ತಂದೆ ಬಸವರಾಜ ಹೊರಟ್ಟಿಯವರು ಈಗಾಗಲೇ ವಿಧಾನ ಪರಿಷತ್ ಸದಸ್ಯರಾಗಿ, ರಾಜ್ಯದ ಶಿಕ್ಷಣ ಸಚಿವರಾಗಿ ಹೆಸರಾದವರು. ನನಗೆ ನನ್ನದೇ ಆದ ಯೋಜನೆ ಮತ್ತು ಗುರಿಗಳಿವೆ. ಅವರ ಪ್ರಭಾವವನ್ನು ಬೆಳೆಸಿಕೊಳ್ಳದೆ ಈ ಚುನಾವಣೆಯಲ್ಲಿ ನಿಮ್ಮ ಆಶೀರ್ವಾದ ಪಡೆದು, ನನ್ನ ಕನಸುಗಳನ್ನು ಸಾಕಾರಗೊಳಿಸಲು ಸಿದ್ಧನಿದ್ದೇನೆ ಎಂದರು. ಗದಗ ಜಿಲ್ಲಾ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಸ್.ಎಂ. ಕೊಟಗಿ, ಸಭೆಯ ಅಧ್ಯಕ್ಷತೆ ವಹಿಸಿದ್ದ ವಿದ್ಯಾದಾನ ಸಮಿತಿ ಅಧ್ಯಕ್ಷ ಧೀರೇಂದ್ರ ಹುಯಿಲಗೋಳ ಮಾತನಾಡಿದರು. ಡಾ. ಬಸವರಾಜ ಧಾರವಾಡ, ರೋಣ ತಾಲೂಕು ಅಧ್ಯಕ್ಷ ಎ.ಬಿ. ಹೊನವಾಡ, ಮುಂಡರಗಿ ತಾಲೂಕು ಅಧ್ಯಕ್ಷ ಬಿ.ಕೆ. ಪಾಟೀಲ, ಶಿರಹಟ್ಟಿ ತಾಲೂಕು ಅಧ್ಯಕ್ಷ ಎಂ.ಕೆ. ಲಮಾಣಿ, ಗದಗ ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ರಾಮಣ್ಣ ಫಲದೊಡ್ಡಿ, ಪ್ರೋಬಸ್ ಕ್ಲಬ್‌ನ ಉಳವಪ್ಪ ಹೊಂಬಳ, ನಿವೃತ್ತ ಪ್ರಾಚಾರ್ಯ ಬಿ.ಎಫ್. ಚೇಗರಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಎಸ್.ಟಿ. ಬ್ಯಾಕೋಡ, ಲಿಂಗಾಯತ ಸಮಾಜದ ನೌಕರರ ಸಂಘದ ಅಧ್ಯಕ್ಷ ಪಾಟೀಲ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಎಂ.ಎಸ್. ಚಿನ್ನೂರ ಸ್ವಾಗತಿಸಿದರು. ಕಾರ್ಯದರ್ಶಿ ಎಸ್.ಎಂ. ಅಗಡಿ ನಿರೂಪಿಸಿದರು. ಉಪಾಧ್ಯಕ್ಷ ಕೆ.ಬಿ. ಭಜಂತ್ರಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.