ಗದಗ

ಹಣ ದುರ್ಬಳಕೆ ಕ್ರಮ ಕೈಗೊಳ್ಳಿ

Published On :

ಕನ್ನಡಪ್ರಭ ವಾರ್ತೆ, ಗದಗ, ಮೇ 19
ಸಾರ್ವಜನಿಕರ ರು. 1 ಲಕ್ಷ ದುರುಪಯೋಗವಾಗಿದ್ದು, ಕೂಡಲೇ ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಪುರಸಭೆ ವಿರೋಧ ಪಕ್ಷದ ನಾಯಕರು, ಸಾರ್ವಜನಿಕರು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗಜೇಂದ್ರಗಡ ಪುರಸಭೆಯಲ್ಲಿ ಆಡಳಿತ ನಡೆಸುತ್ತಿರುವ ಆಡಳಿತ ಮಂಡಳಿಯ ಪುರಸಭಾ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು 2013-14ನೇ ಸಾಲಿನಲ್ಲಿ ಹಣವನ್ನು ಕಾನೂನು ಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಕರ್ನಾಟಕ ಜನಹಿತ ವೇದಿಕೆ ಹೆಸರಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ರು. 1 ಲಕ್ಷ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕ್ರಮಕ್ಕೆ ಆಗ್ರಹ: ಅಧ್ಯಕ್ಷರು ಸಾಮಾನ್ಯ ಸಭೆಯಲ್ಲಿ ಈ ವಿಷಯವನ್ನು ಗಮನಕ್ಕೆ ತರದೆ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅದಕ್ಕೆ ಸಂಬಂಧಪಟ್ಟ ಅರ್ಜಿ ಲಗತ್ತು, ಪುರಸಭೆಯಿಂದ ಹಣ ಬಿಡುಗಡೆ ಮಾಡಿದ ಬಗೆ ಪಾವತಿ ವೋಚರ್ ಮತ್ತು ಅಧ್ಯಕ್ಷರು ಹಣ ಬಿಡುಗಡೆ ಮಾಡಲು ಮಂಜೂರಿ ನೀಡಿದ ಆದೇಶ ಪ್ರತಿಯ ದೃಢೀಕೃತ ನಕಲನ್ನು ಹಚ್ಚಲಾಗಿದ್ದು, ಇದರಿಂದ ಅಧ್ಯಕ್ಷರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು ಸಾಬೀತಾಗಿದೆ.
ಸಂಬಂಧ ಪಟ್ಟವರ ವಿರುದ್ಧ ಸೂಕ್ತ ತನಿಖೆ ನಡೆಸಿ ಅಧ್ಯಕ್ಷರ ಸದಸ್ಯತ್ವ ಅನರ್ಹಗೊಳಿಸಿ, ಕ್ರಮ ಜರುಗಿಸಬೇಕಾಗಿ ಮನವಿಯಲ್ಲಿ ವಿನಂತಿಸಿದರು. ಶಿವರಾಜ ಘೋರ್ಪಡೆ, ಜಂಬಣ್ಣ ಚವಡಿ, ಸುಜಾತಾ, ರಾಮಸಾ ಬಸವಾ, ಬಾಬು ಮುಧೋಳ, ಬೀಮಸಿ ತಳವಾರ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.