ಗದಗ

23ಕ್ಕೆ ಮಠ ಲೋಕಾರ್ಪಣೆ

Published On :

ಲಕ್ಷ್ಮೇಶ್ವರ: ಸಮೀಪದ ಬಾಲೆಹೊಸೂರ ಗ್ರಾಮದ ದಿಂಗಾಲೇಶ್ವರ ಮಠ ಲೋಕಾರ್ಪಣೆ, ದಾಸೋಹ ಮನೆ ಉದ್ಘಾಟನೆ ಮೇ 23, 24, 25ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ನಾಡಿನ ರಾಜಕೀಯ ಗಣ್ಯರು, ಮಠಾಧೀಶರು ಆಗಮಿಸುವ ಹಿನ್ನೆಲೆಯಲ್ಲಿ ಸಮಾರಂಭದ ಮುಖ್ಯವೇದಿಕೆಯನ್ನು ಸಚಿವ ಎಚ್.ಕೆ. ಪಾಟೀಲ ಮಂಗಳವಾರ ಪರಿಶೀಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪತಂಜಲಿ ಯೋಗಪೀಠದ ಬಾಬಾ ರಾಮದೇವ, ಇನ್ಫೋಸಿಸ್‌ನ ಸುಧಾಮೂರ್ತಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಸಚಿವರು, ಶಾಸಕರು, ರಾಜಕೀಯ ಮುಖಂಡರು, ಕಾಶಿಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು, ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯರು ಇನ್ನಿತರ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕಾಗಿ ಭರದ ಸಿದ್ಧತೆಗಳನ್ನು ಪರಿಶೀಲಿಸಿದ ಸಚಿವ ಎಚ್.ಕೆ. ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.
25 ಸಾವಿರ ಚದರ ಅಡಿಯಲ್ಲಿ ಮುಖ್ಯ ವೇದಿಕೆ ನಿರ್ಮಾಣಕ್ಕೆ ಬೃಹತ್ ಪೆಂಡಾಲ ಹಾಕಲಾಗುತ್ತಿದೆ. ಉಳಿದ ಕಾರ್ಯಕ್ರಮಗಳಿಗೆ ಬೇರೆ ಬೇರೆ ವೇದಿಕೆಗಳನ್ನು ನಿರ್ಮಿಸಲಾಗಿದೆ.
ಪ್ರತಿ ದಿನ 2ರಿಂದ 3 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದೆ. 25ರಂದು ಸಮಾರೋಪ ಸಮಾರಂಭಕ್ಕೆ 5 ಲಕ್ಷಕ್ಕೂ ಹೆಚ್ಚು ಭಕ್ತರು ಬರಲಿದ್ದಾರೆ. ಭಕ್ತರಿಗಾಗಿ ಲಕ್ಷಾಂತರ ರೊಟ್ಟಿಗಳನ್ನು ತಯಾರಿಸಲಾಗಿದೆ. ಬುಂದಿ ಲಡ್ಡುಗಳು, ಕಡಬು, ಹೋಳಿಗೆ, ಗೋದಿ ಹುಗ್ಗಿ ಮೊದಲಾದ ಸಿಹಿ ಭಕ್ಷ್ಯಗಳು, ನೂರಾರು ಕ್ವಿಂಟಲ್ ಅಕ್ಕಿಯನ್ನು ದಾಸೋಹಕ್ಕಾಗಿ ಬಳಸಲಾಗುತ್ತಿದೆ ಎಂದು ಮಠದ ಕುಮಾರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.