ಗದಗ

ದಕ್ಷ ಆಡಳಿತ: ಕಾಂಗ್ರೆಸ್ ವಿಫಲ

Published On :

ಗದಗ: ವರ್ಷದ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ದಕ್ಷ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಗದಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಎಂ. ಹಿರೇಮಠ ಅವರು ಆರೋಪಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ವರ್ಷದ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯ ಸರ್ಕಾರ ಅನೇಕ ಭರವಸೆಗಳನ್ನು ನೀಡಿದೆ. ಅವುಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೆಲವರ ಸಾಲ ಮನ್ನಾ ಮಾಡುವುದನ್ನು ಬಿಟ್ಟರೆ ಬೇರೆ ಯಾವುದೇ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿಲ್ಲ. ಜನ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರೂ ಅಭಿವೃದ್ಧಿ ಬಗ್ಗೆ ಎಳ್ಳಷ್ಟೂ ಚಿಂತನೆಯನ್ನು ಮಾಡದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದಿದ್ದಾರೆ. ಅನೇಕ ಸಚಿವರು ತಮ್ಮ ಖಾತೆಗೆ ಸಂಬಂಧಪಟ್ಟ ಅಭಿವೃದ್ಧಿ ವಿಷಯದಲ್ಲಿ ವಿಫಲರಾಗಿದ್ದಾರೆ.
ಗದಗ ಜಿಲ್ಲೆಗೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ವರ್ಷದ ಅವಧಿಯಲ್ಲಿ ಯಾವುದೇ ಹೊಸ ಯೋಜನೆ ಜಾರಿಗೆ ತಂದಿಲ್ಲ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಮಂಜೂರಾದ ಕಾಮಗಾರಿಗಳೇ ಮುಂದುವರಿಯುತ್ತಿದ್ದು, ಗದಗ ಜಿಲ್ಲೆಯಲ್ಲಿ ಅಭಿವೃದ್ಧಿಗೆ ತೀವ್ರ ಹಿನ್ನಡೆಯಾಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗದಗ ಜಿಲ್ಲೆಗೆ ನಗರೋತ್ಥಾನ ಯೋಜನೆ ಅಡಿ 65 ಕೋಟಿ ಮಂಜೂರು ಮಾಡಿದ್ದು, ವರ್ಷದ ಹಿಂದೆಯೇ ಟೆಂಡರ್ ಕರೆಯಲಾಗಿತ್ತು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷವಾದರೂ ರು. 65 ಕೋಟಿ ಬಳಸುವುದರಲ್ಲಿ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಈಗಾಗಲೇ ಬೇರೆ ಜಿಲ್ಲೆಗಳಲ್ಲಿ ನಗರೋತ್ಥಾನದ ಕೆಲಸಗಳು ಮುಕ್ತಾಯ ಹಂತಕ್ಕೆ ಬಂದಿದ್ದು, ಆದರೆ ಜಿಲ್ಲೆಯಲ್ಲಿ ಇನ್ನೂ ಟೆಂಡರ್ ಪ್ರಕ್ರಿಯೆ ನಡೆದಿದ್ದು ಇದರಲ್ಲಿ ರಾಜಕೀಯ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ನೇರ ಹೊಣೆಗಾರರು. ಕೇವಲ ಚಿಂತನೆಗಳನ್ನು ವ್ಯಕ್ತಪಡಿಸುವುದರಿಂದ ಅಭಿವೃದ್ಧಿ ಕಾರ್ಯಗಳಾಗುವುದಿಲ್ಲ. ವ್ಯಕ್ತಪಡಿಸಿದ ಚಿಂತನೆಗಳನ್ನು ಕಾರ್ಯ ರೂಪಕ್ಕೆ ತರಬೇಕಾದರೆ ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಅವಶ್ಯಕತೆ ಇರುತ್ತದೆ. ಜನ ಈಗಾಗಲೇ ರಾಜ್ಯ ಸರ್ಕಾರಕ್ಕೆ ಪಾಠ ಕಲಿಸಿದ್ದು, ತಮ್ಮ ಒಳಜಗಳಗಳನ್ನು ಬಿಟ್ಟು ರಾಜ್ಯದ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಎಲ್ಲ ಸಚಿವರು, ಶಾಸಕರು ಶ್ರಮಿಸಬೇಕೆಂದು ಎಂ.ಎಂ. ಹಿರೇಮಠ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.