ಸಮರ್ಪಕ ಪಡಿತರ ಚೀಟಿ ವಿತರಿಸಿ
ಕನ್ನಡಪ್ರಭ ವಾರ್ತೆ, ಗದಗ, ಮೇ 23
ಪಡಿತರ ಚೀಟಿ ವಿತರಣೆ ಹಾಗೂ ಸಮರ್ಪಕ ಪಡಿತರ ವಿತರಣೆಗೆ ಆಗ್ರಹಿಸಿ ಗುರುವಾರ ಜೈಭೀಮ ಸೇನೆ ಸಂಘಟನೆ ನೇತೃತ್ವದಲ್ಲಿ ಗದಗ ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಇನ್ನೂವರೆಗೂ ಎಲ್ಲರಿಗೂ ಸರಿಯಾಗಿ ಪಡಿತರ ಚೀಟಿ ಮುಟ್ಟಿರುವುದಿಲ್ಲ ಮತ್ತು ಪಡಿತರ ಚೀಟಿ ಇದ್ದವರಿಗೂ ಸರಿಯಾಗಿ ರೇಷನ್ ಸಿಗುವುದಿಲ್ಲ ಹಾಗೂ ಸೀಮೆಎಣ್ಣೆ ಸಿಗುವುದಿಲ್ಲ. ಇದರಿಂದ ಜನಸಾಮಾನ್ಯರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಕಾರಣ ಸರ್ಕಾರ ಇದರ ಬಗ್ಗೆ ಸರಿಯಾದ ಕಾಳಜಿ ವಹಿಸಿಲ್ಲ ಮತ್ತು ಮೇಲಧಿಕಾರಿಗಳೂ ಗಮನಹರಿಸಿಲ್ಲ. ಸರ್ಕಾರ ನೀಡುವ ಅಕ್ಕಿ, ಗೋದಿ, ಸಕ್ಕರೆ, ಸೀಮೆಎಣ್ಣೆ ಇವೆಲ್ಲವುಗಳನ್ನು ಜನರಿಗೆ ಸರಿಯಾಗಿ ತಲುಪುತ್ತಿಲ್ಲ. ಆದ್ದರಿಂದ ಮೇಲಧಿಕಾರಿಗಳಾದ ತಾವು ಇದರ ಬಗ್ಗೆ ಹೆಚ್ಚಿಗೆ ಗಮನಹರಿಸಬೇಕು.
ಪ್ರತಿ ತಿಂಗಳು ನೀಡುವ ರೇಷನ್ ಸರಿಯಾಗಿ ವಿತರಣೆ ಮಾಡುತ್ತಿಲ್ಲ. ಇದರಿಂದ ಬಡವರು, ಕೂಲಿಕಾರ್ಮಿಕರು, ದೀನ ದಲಿತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕಾರಣ ಎಲ್ಲರಿಗೂ ಪಡಿತರ ಚೀಟಿ ಕೊಡಬೇಕು. 15 ದಿನದೊಳಗಾಗಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಜೈ ಭೀಮ ಸೇನೆ ವತಿಯಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಿದೆ.
ಜೈಭೀಮ ಸೇನಾ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಹುಬ್ಬಳ್ಳಿ, ಕಾರ್ಯದರ್ಶಿ ರಾಘವೇಂದ್ರ ಪರಾಪುರ, ಉಪಾಧ್ಯಕ್ಷ ಮಂಜುನಾಥ ತೌಜಲ, ದೀಪಕ ಕಲ್ಮನಿ, ಪರಶುರಾಮ ಸಂಗಾಪುರ, ಓಬಳೇಶ ಯಶವಂತಪುರ, ಮಂಜುನಾಥ ಪರಾಪುರ, ಹೇಮಂತ ಹುಬ್ಬಳ್ಳಿ, ರಾಷ್ಟ್ರೀಯನ್ ಜೋಸೆಫ್, ಬಸವರಾಜ ಬದಾಮಿ, ಪ್ರೇಮ ಹುಬ್ಬಳ್ಳಿ, ಶಂಕರ ಹುಬ್ಬಳ್ಳಿ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

