ಅರ್ಜಿ ಅಹ್ವಾನ
ಗದಗ: ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನರಗುಂದ ತಾಲೂಕಿನ ಸ.ಮೆ.ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನರಗುಂದ, ಕೊಣ್ಣೂರು, ಶಿರೋಳದಲ್ಲಿ ಬಾಲಕರ, ನರಗುಂದದಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯಗಳಿವೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಲೇಖನ ಸಾಮಗ್ರಿಗಳು, ಸಮವಸ್ತ್ರ, ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಅಲ್ಪಾವಧಿ ಬೋಧಕರ ಸೌಲಭ್ಯ ಒದಗಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ ಅಥವಾ ಸಂಬಂಧಿತ ವಿದ್ಯಾರ್ಥಿ ನಿಲಯಗಳಲ್ಲಿ ಅರ್ಜಿ ಫಾರ್ಮಗಳನ್ನು ಉಚಿತವಾಗಿ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 10 ಕೊನೆ ದಿನ.
ಪ್ರಶಸ್ತಿಗೆ ಅರ್ಜಿ ಆಹ್ವಾನ
ಗದಗ: ಕೃಷಿ ಇಲಾಖೆಯ 2013-14ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿ ಅಹ್ವಾನಿಸಿದೆ. ಅರ್ಜಿಗಳನ್ನು ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಲು ಮೇ 28 ಕೊನೆ ದಿನ. ಅರ್ಜಿ ನಮೂನೆ, ಹೆಚ್ಚಿನ ಮಾಹಿತಿ ಮತ್ತು ಲಗತ್ತಿಸಬೇಕಾದ ದಾಖಲೆಗಳ ಕುರಿತು ಸಮೀಪದ ರೈತ ಸಂಪರ್ಕ ಕೇಂದ್ರಗಳನ್ನು, ರೈತಮಿತ್ರ ವೆಬ್ಸೈಟ್ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ವಸತಿ ನಿಲಯಕ್ಕೆ ಅರ್ಜಿ
ಗದಗ: ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಡೆಸುತ್ತಿರುವ ಮುಂಡರಗಿ ತಾಲೂಕಿನ ಮೆ.ಪೂ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ 5ರಿಂದ 10ನೇ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮುಂಡರಗಿ, ಕೊರ್ಲಹಳ್ಳಿ, ಶಿಂಗಟಾಲೂರು, ಡಂಬಳ, ಪೇಠಾಲೂರು, ಹಿರೇವಡ್ಡಟ್ಟಿ, ಡೋಣಿ, ಜಂತ್ಲಿ ಶಿರೂರಗಳಲ್ಲಿರುವ ಬಾಲಕರ, ಮುಂಡರಗಿಯಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯಗಳಿವೆ. ಆಸಕ್ತ ವಿದ್ಯಾರ್ಥಿಗಳು ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಸಂಬಂಧಿತ ವಿದ್ಯಾರ್ಥಿ ನಿಲಯಗಳಲ್ಲಿ ಅರ್ಜಿಗಳನ್ನು ಉಚಿತ ಪಡೆದು ಭರ್ತಿ ಮಾಡಿ ಸಲ್ಲಿಸಲು ಜೂನ್ 5 ಕೊನೆ ದಿನ.
ವಸತಿ ನಿಲಯಕ್ಕೆ ಅರ್ಜಿ
ಗದಗ: ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ ರೋಣ ತಾಲೂಕಿನ 7 ಸರ್ಕಾರಿ, 6 ಅನುದಾನಿತ ಮೆ.ಪೂ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ 5ರಿಂದ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ, 2 ಸರ್ಕಾರಿ ನಿಲಯಗಳಲ್ಲಿ 4ರಿಂದ 10ನೇ ತರಗತಿಗಳಲ್ಲಿ ಓದುತ್ತಿರುವ ಮತ್ತು ರೋಣ, ಗಜೇಂದ್ರಗಡ, ನರೇಗಲ್ಲಗಳಲ್ಲಿರುವ ಮೆಟ್ರಿಕ್ ನಂತರದ ವಿದಾರ್ಥಿ ನಿಲಯಗಳಿಗೆ ಪಿಯು, ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 16, ಮೆ. ನಂತರದವರಿಗೆ ಜುಲೈ 10 ಕೊನೆ ದಿನ. ಹೆಚ್ಚಿನ ಮಾಹಿತಿ, ನಿಗದಿತ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ನಿಲಯಗಳಲ್ಲಿ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ಮಿನಿ ವಿಧಾನಸೌಧ ರೋಣ ಇಲ್ಲಿ ಪಡೆಯಬಹುದು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

