ಗದಗ

ಯೋಜನೆ ಸದುಪಯೋಗಪಡಿಸಿಕೊಳ್ಳಿ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಮೇ 27
ಜಾತಿ, ಮತ, ಪಂಥ ಎಂಬ ಭೇದ ಎಣಿಸದೆ ವಿಕಲಚೇತನ, ಅಂಧ ಮಕ್ಕಳು, ದುರ್ಬಲರ ಗುರುತಿಸಿ ಮಾಸಾಶನ ನೀಡುವುದು. ಬಡ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಸಹಾಧನ ನೀಡಿ ಎಲ್ಲರ ಬಾಳಿನ ಬೆಳಕಾಗಿರುವ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದು ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ ಹೇಳಿದರು.
ಮಂಗಳವಾರ ಪಟ್ಟಣದ ಸಂಸ್ಥೆಯ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಗತಿ ನಿಧಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು.
ಸರ್ಕಾರ ಅನೇಕ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸದಿರುವುದರಿಂದ ಯಾವ ಯೋಜನೆಗಳು ಯಶಸ್ವಿಯಾಗಿಲ್ಲ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸ್ವ-ಸಹಾಯ ಸಂಘದ ಮಹಿಳೆಯರು ಸಾಲ ಪಡೆದುಕೊಂಡು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸುಧಾರಣೆಯಾಗಬೇಕು ಎಂದರು.
ಮಹಿಳೆಯರು ಮಾನ ಕಾಪಾಡಿಕೊಳ್ಳುವ ದೃಷ್ಟಿಯಿಂದ ಮೊದಲು ವೈಯಕ್ತಿಕ ಶೌಚಾಲಯ ಹೊಂದುವುದು ಅಗತ್ಯವಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ನೀಡುವ ಸಹಾಯಧನ ಮತ್ತು ಪರಿಕರಗಳನ್ನು ಪಡೆದುಕೊಳ್ಳುವ ಜತೆಗೆ ಈ ಬಾರಿ ಪಪಂಯಿಂದಲೂ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳುವ ಯೋಜನೆ ಸಿದ್ಧಪಡಿಸಿದ್ದು, ಇದಕ್ಕಾಗಿಯೇ ರು. 20 ಲಕ್ಷ ಕ್ರಿಯಾ ಯೋಜನೆಯಲ್ಲಿ ತೆಗೆದಿಡಲಾಗಿದೆ. ಫಲಾನುಭವಿಗಳು ಇದರ ಲಾಭ ಪಡೆದುಕೊಳ್ಳಬೇಕೆಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕ ಜಯಂತ ಪೂಜಾರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ 46 ನಿರ್ಗತಿಕ ಕುಟುಂಬಗಳನ್ನು ಗುರುತಿಸಿ ಮಾಶಾಸನ ನೀಡಲಾಗಿದೆ. 200ಕ್ಕೂ ಹೆಚ್ಚು ಕುಟುಂಬದವರಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಪರಿಕರ ವಿತರಣೆ ಮಾಡಲಾಗಿದೆ. ಸತ್ತ ಜಾನುವಾರಿಗೆ ಪರಿಹಾರ ರೂಪದಲ್ಲಿ ರು. 20 ಸಾವಿರ ನೀಡಲಾಗಿದ್ದು, ಎಲ್ಲ ಸದುಪಯೋಗಪಡಿಸಿಕೊಂಡು ಸಫಲರಾಗಬೇಕು ಎಂದರು. ಯೋಜನಾಧಿಕಾರಿ ಮಹೇಶ ಎಸ್, ಸುರೇಶ ಅಕ್ಕಿ, ಎಸ್.ಜಿ. ಚನ್ನಮ್ಮ, ಪುರಂದರ, ವಿಠ್ಠಲ ಪೂಜಾರ ನೂರಾರು ಮಹಿಳೆಯರು ಇತರರಿದ್ದರು.
ಗ್ರಾಮೀಣ ಪ್ರದೇಶದ ಸ್ವ-ಸಹಾಯ ಸಂಘಗಳು ದೇಶದ ಅಭಿವೃದ್ಧಿಗೆ ಪೂರಕವಾಗಲಿ. ಪ್ರತಿಯೊಬ್ಬರು ಮೊದಲು ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಿ. ಪ್ರಾಮಾಣಿಕ ಪ್ರಯತ್ನದ ಜತೆಗೆ ಉಳಿತಾಯದತ್ತ ಗಮನ ಹರಿಸಬೇಕು.
- ನಾಗರಾಜ ಲಕ್ಕುಂಡಿ,
ಪಪಂ ಅಧ್ಯಕ್ಷ, ಶಿರಹಟ್ಟಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.