ಹಯ್ಯಾಳ: ನೀರಿನ ಸಮಸ್ಯೆ ನಿವಾರಣೆಗೆ ಒತ್ತಾಯ
ಯಾದಗಿರಿ: ಶಹಾಪುರ ತಾಲೂಕಿನ ಹಯ್ಯಾಳ ಬಿ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ತೀವ್ರವಾಗಿದೆ. ಕೂಡಲೇ ನೀರಿನ ಸಮಸ್ಯೆ ನಿವಾರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಕಾರ್ಯಕರ್ತರು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗ್ರಾಮಗಳಲ್ಲಿ ಬೋರ್ವೆಲ್ ಕೆಟ್ಟು ಕುಡಿಯುವ ನೀರಿಗಾಗಿ ಜನತೆ ತುಂಬಾ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿವ ನೀರಿಗಾಗಿ ಹಲವಾರು ಯೋಜನೆಗಳಲ್ಲಿ ಅನುದಾನ ಇದ್ದರೂ, ಪಿಡಿಒ ಮತ್ತು ಜೆಇ ಹಾಗೂ ಚುನಾಯಿತಿ ಪ್ರತಿನಿಧಿಗಳು ನಿರ್ಲಕ್ಷ್ಯದಿಂದ ಗ್ರಾಮಗಳಲ್ಲಿ ನೀರಿನ ಸಮಸ್ಯೆ ನಿವಾರಿಸಲು ವಿಫಲವಾಗಿದ್ದಾರೆ ಎಂದು ದೂರಿದ್ದಾರೆ. ಗ್ರಾಮಗಳಲ್ಲಿನ ಚರಂಡಿ ತುಂಬಿ ಹರಿತುತ್ತಿದೆ. ಇದರಿಂದ ಅನೇಕ ರೋಗಗಳು ಹರಡುವ ಆಂತಕ ಜನರಲ್ಲಿ ಹೆಚ್ಚಾಗಿದೆ. ಕೂಡಲೇ ಚರಂಡಿ ಸ್ಚಚ್ಛತೆಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಅಧಿಕಾರಿಗಳು ಎಚ್ಚೆತ್ತುಕೊಂಡು ಗ್ರಾಮಗಲ್ಲಿ ಬೋರ್ವೆಲ್ ಕೊರೆಯಬೇಕು. ಹೊಸ ಪೈಪ್ಲೈನ್ ನಿರ್ಮಾಣ ಮಾಡಿ, ನಳಗಳ ದುರಸ್ತಿ ಕಾರ್ಯ ಕೈಗೊಂಡು ನೀರಿನ ಸಮಸ್ಯೆ ಕೂಡಲೇ ನಿವಾರಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಶಹಾಪುರ ತಾಲೂಕು ಅಧ್ಯಕ್ಷ ಗುರುರಾಜ ಎನ್. ಯಕ್ಷಂತಿ, ಜಿಲ್ಲಾ ಸಂಚಾಲಕ ಕುಮಾರ ಬಳಿಚಕ್ರ, ನಿಂಗರಾಜ ಗುಂಟನೂರ, ಆಂಜಿನೇಯ ತಂಗಲಬಾವಿ, ಮಾನಪ್ಪ ಹೈಯಾಳ, ಭೀಮಾಶಂಕರ ಹೈಯಾಳ, ದುರ್ಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

