ಪದವಿಗಿಂತ ಮಾನವೀಯತೆ ಮುಖ್ಯ: ನ್ಯಾ. ಪಾಟೀಲ್
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಏ.1
ವಿಶ್ವವಿದ್ಯಾಲಯಗಳು, ಕಾಲೇಜುಗಳು ಎಷ್ಟು ಪದವಿ ನೀಡುತ್ತವೆ ಎಂಬುದು ಮುಖ್ಯವಲ್ಲ, ಎಷ್ಟು ಜನ ಒಳ್ಳೆಯ ಮತ್ತು ಹೊಣೆಗಾರಿಕೆಯುಳ್ಳ, ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿಗಳನ್ನು ತಯಾರು ಮಾಡಿವೆ ಎಂಬುದು ಮುಖ್ಯ. ಹೀಗಾಗಿ ಶಿಕ್ಷಕರು ಮಕ್ಕಳಲ್ಲಿ ಬದ್ಧತೆಯನ್ನು ಬೆಳೆಸಬೇಕು, ಮಾನವೀಯ ಗುಣಗಳನ್ನು ತುಂಬಬೇಕು ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಶಿವರಾಜ ಪಾಟೀಲ್ ಕಿವಿಮಾತು ಹೇಳಿದರು.
ಗ್ರಂಥ ಲೋಕಾರ್ಪಣೆ: ನಗರದ ಸಾಯಿಮಂದಿರ ಬಳಿಯಿರುವ ಸರ್ವಜ್ಞ ವಸತಿ ಪಿಯು ವಿಜ್ಞಾನ ಕಾಲೇಜು ಮತ್ತು ಜಸ್ಟಿಸ್ ಶಿವರಾಜ ಪಾಟೀಲ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಹಾಗೂ ಮುಂಜಾವಿಗೊಂದು ನುಡಿಕಿರಣ ಗ್ರಂಥ ಲೋಕಾರ್ಪಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೈದ್ರಾಬಾದ್ ಕರ್ನಾಟಕ ಪ್ರಗತಿಯಲ್ಲಿ ಹಿಂದುಳಿದಿರಬಹುದು ಆದರೆ ಇಲ್ಲಿನ ಪ್ರತಿಭೆಗಳಿಗೆ ಕೊರತೆಯಿಲ್ಲ, ಅವರಿಗೆ ವೇದಿಕೆ ಕಲ್ಪಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಪ್ರೊ. ಚನ್ನಾರೆಡ್ಡಿ ಪಾಟೀಲ್ ಮತ್ತು ಗೀತಾ ಚನ್ನಾರೆಡ್ಡಿ ಪಾಟೀಲ್ ಸೇರಿಕೊಂಡು ವಿದ್ಯಾರ್ಥಿಗಳ ಸೇವೆಯೇ ದೇವರ ಸೇವೆಯೆಂದು ಕೆಲಸ ಮಾಡುತ್ತಿರುವುದು ಅಮೋಘ ಎಂದರು.
ವಚನ ಮಾರ್ಗದರ್ಶನ: ಹಿರಿಯ ಪತ್ರಕರ್ತ, ಸಾಹಿತಿ ರಂಜಾನ ದರ್ಗಾ, ನ್ಯಾ. ಶಿವರಾಜ ಪಾಟೀಲ್ ವಿರಚಿತ ಮುಂಜಾನೆಗೊಂದು ನುಡಿಕಿರಣ ಗ್ರಂಥವನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ಶಿವರಾಜ ಪಾಟೀಲ್‌ರ ಜೀವನಾನುಭವದ ಮೂಸೆಯಲ್ಲಿ ಬೆಂದು ಪರಿಪಕ್ವಗೊಂಡ ಅಪರೂಪದ ವಿಚಾರಗಳೇ ಈ ನುಡಿಕಿರಣಗಳು ಇವು ಶರಣರ ವಚನಗಳನ್ನು ನೆನಪಿಗೆ ತಂದು ಬದುಕಿಗೆ ಬೇಕಾದ ಮಾರ್ಗದರ್ಶನ ಮಾಡುತ್ತದೆ ಎಂದರು.
ರಾಷ್ಟ್ರಪತಿ ಪದಕ ಪಡೆದ ರವೀಂದ್ರ ಶಾಬಾದಿ ಮತ್ತು ರಾಜ್ಯ ಸರ್ಕಾರದ ಉತ್ತಮ ಪ್ರಕಾಶಕ ಪ್ರಶಸ್ತಿ ಪಡೆದ ಬಸವರಾಜ ಕೊನೆಕ್ ಇತರರಿಗೆ ಸನ್ಮಾನಿಸಿ ಗೌರವಿಸಲಾಯಿತು ಮತ್ತು ಪ್ರತಿಭಾವಂತ ಮತ್ತು ಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಸುಲಫಲ ಮಠದ ಮಹಾಂತ ಶಿವಾಚಾರ್ಯರು ಮತ್ತು ಖಜೂರಿಯ ಮುರಘರಾಜೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಉದ್ಯಮಿ ಎಸ್.ಎಸ್. ಪಾಟೀಲ್ ಕಡಗಂಚಿ, ಅಮೆರಿಕದ ನೇತ್ರತಜ್ಞ ಡಾ. ಚಂದಪ್ಪ ರೇಷ್ಮಿ ಮುಖ್ಯ ಅತಿಥಿಗಳಾಗಿದ್ದರು. ಸರ್ವಜ್ಞ ಕಾಲೇಜಿನ ಸಂಸ್ಥಾಪಕ ಚನ್ನಾರೆಡ್ಡಿ ಪಾಟೀಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಗಂಗಾಧರ ನಿರೂಪಿಸಿದರು. ಸಂಸ್ಥೆಯ ಅಧ್ಯಕ್ಷೆ ಗೀತಾ ಚನ್ನಾರೆಡ್ಡಿ ವಂದಿಸಿದರು.
ಪ್ರಾಚಾರ್ಯ ಎಂ.ಸಿ. ಕಿರೇದಳ್ಳಿ, ವಿನುತಾ ಆರ್.ಬಿ. ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

