'ಖಾತ್ರಿ' ವೇತನ ಪಾವತಿಗೆ ಒತ್ತಾಯ
ಕನ್ನಡಪ್ರಭ ವಾರ್ತೆ, ಚಿಂಚೋಳಿ, ಏ.2
ತಾಲೂಕಿನಲ್ಲಿ 2012-13ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬದುಕು ನಿರ್ಮಾಣ ಮಾಡಿದ ಕೂಲಿಕಾರರಿಗೆ ವೇತನ ಪಾವತಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತಸಂಘದ ಮುಖಂಡರು ತಾಲೂಕು ಪಂಚಾಯತಿ ಕಾರ್ಯಾಲಯ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ತಾಲೂಕಿನಲ್ಲಿರುವ ಅನೇಕ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಖಾತ್ರಿ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಅನೇಕ ಬಡ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿದೇ ಕೆಲವು ಕಡೆ ಯಂತ್ರ (ಜೆಸಿಬಿ)ದ ಮೂಲಕ ಕೆಲಸಗಳನ್ನು ಮಾಡಿ ಅಧಿಕಾರಿಗಳು ಬಿಲ್ ಮಾಡಿ ಯೋಜನೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿದರು.
ಕೂಲಿ ಕಾರ್ಮಿಕರಿಗೆ ಕಳದೆ 9 ತಿಂಗಳಿಂದ ವೇತನ ನೀಡಿಲ್ಲ. ಕೂಡಲೇ ವೇತನ ನೀಡಬೇಕೆಂದು ಮುಖಂಡ ಸಿದ್ದಲಿಂಗಯ್ಯ ಸ್ವಾಮಿ ಎಂಪಳ್ಳಿ ಆಗ್ರಹಿಸಿದರು.
ಸಾಲೇಬೀರನಳ್ಳಿ, ಯಂಪಳ್ಳಿ, ಕನಕಪುರ, ಕೆರೋಳಿ, ನಾಗಾಇದಲಾಯಿ, ಕೊಳ್ಳುರ, ಭಂಟನಳ್ಳಿ ಮುಂತಾದ ಗ್ರಾಮಗಳ ಕೂಲಿ ಕಾರ್ಮಿಕರಿಗೆ ಕೂಲಿವೇತನ ನೀಡಬೇಕೆಂದು ಮನವಿ ಪತ್ರವನ್ನು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಗದೇವ ಬೈಗೊಂಡ ಸ್ವೀಕರಿಸಿ ಮಾತನಾಡಿ, ಈ ಬಗ್ಗೆ ಮೇಲಾಧಿಕಾರಿಗಳೊಂದಿಗೆ ಮತ್ತು ಪಂಚಾಯತಿ ಅಭಿವೃದ್ಧಿಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವಾಗಿ ವೇತನ ನೀಡುವ ವ್ಯವಸ್ಥೆ ಮಾಡಲಾಗುವುದೆಂದು ಭರವಸೆ ನೀಡಿದ ನಂತರ ಧರಣಿ ಸತ್ಯಾಗ್ರಹ ವಾಪಸ್ಸು ಪಡೆಯಲಾಯಿತು.
ಪ್ರದೀಪ ತಿರಲಾಪುರ, ಶರಣಬಸಪ್ಪ ಮಮಶೆಟ್ಟಿ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ರಾಯಚೂರು ವರದಿ: ತಾಲೂಕಿನ ಬಾಯಿದೊಡ್ಡಿ ಗ್ರಾಪಂ ವ್ಯಾಪ್ತಿಯ ಕಡಗಂದೊಡ್ಡಿ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಬಾಕಿ ಕೂಲಿ ಪಾವತಿಗೆ ಆಗ್ರಹಿಸಿ ಕೂಲಿಕಾರ್ಮಿಕರು ಕರ್ನಾಟಕ ರಾಜ್ಯ ರೈತಸಂಘ(ಕೋಡಿಹಳ್ಳಿ ಬಣ) ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಜಿಪಂ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಪಂ ಸಿಇಒಗೆ ಮನವಿ ಸಲ್ಲಿಸಿ, ಉದ್ಯೋಗ ಖಾತ್ರಿ ಯೋಜನೆ ಅಡಿ ಕಡಗಂದೊಡ್ಡಿ ಗ್ರಾಮದ ಕೆರೆಯ ಹೂಳೆತ್ತುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಕಾಮಗಾರಿ ನಿರ್ವಹಿಸಿದ ಕೂಲಿಕಾರ್ಮಿಕರಿಗೆ ಜಿಪಂನಿಂದ 3,44,100 ಕೂಲಿ ಹಣ ಪಾವತಿಯಾಗಿಲ್ಲ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

