ಗುಲ್ಬರ್ಗಾ

ಆಸ್ಪತ್ರೆ ವೈದ್ಯ ಸಿಬ್ಬಂದಿ ವಿರುದ್ಧ ಸ್ಥಳೀಯರ ಆಕ್ರೋಶ

Published On :

ಗುಲ್ಬರ್ಗ/ಶಹಾಬಾದ್: ಶಹಾಬಾದ್ ನಗರದ ಸಮುದಾಯ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ ವಿರೋಧಿಸಿ, ಆಕ್ರೋಶಗೊಂಡ ಸ್ಥಳೀಯರು ಆಸ್ಪತ್ರೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
  ಮಂಗಳವಾರ ರಾತ್ರಿ ಆಶಾ ಎಂಬ ಮಹಿಳೆ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ನಡೆಸಿದ್ದಳು. ಅವಳನ್ನು ತಡೆಯಲು ಹೋದ ಅತ್ತೆ ಹಮೀದಾ ಮಗಳು ಫಾತೀಮ ಗಾಯಗೊಂಡು ಅವರನ್ನು ಸರ್ಕಾರಿ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆಗೆ ಸೇರಿಸಲಾಗಿತ್ತು.
  ಆದರೆ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಇಲ್ಲದೆ ಖಾಸಗಿ ವೈದ್ಯರು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಗುಲ್ಬರ್ಗಕ್ಕೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯಲ್ಲಿ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಸಾರ್ವಜನಿಕರು ಮಂಗಳವಾರ ರಾತ್ರಿಯೇ ಆಸ್ಪತ್ರೆ ಬಾಗಿಲಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
  ಬುಧವಾರ ಬೆಳಗ್ಗೆ ಪ್ರತಿಭಟನಾಕಾರರು ಆಸ್ಪತೆಯ ಮುಂದೆ ಧಾವಿಸಿ ಪ್ರತಿಭಟನೆಯನ್ನು ಮುಂದುವರೆಸಿದ್ದಲ್ಲದೆ, ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು ಆಗಮಿಸುವವರೆಗೆ ಆಸ್ಪತ್ರೆಯ ಬೀಗ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಮಾತುಕತೆ: ಪ್ರತಿಭಟನೆಯ ತೀವ್ರತೆಯನ್ನು ಮನಗಂಡ ಜಿಲ್ಲಾ ವೈದ್ಯಾಧಿಕಾರಿ ಡಾ. ಶಿವರಾಜ ಸಜ್ಜನಶೆಟ್ಟಿ, ತಾಲೂಕು ವೈದ್ಯಾಧಿಕಾರಿ ಡಾ. ಪ್ರಭುಲಿಂಗ ಮಾನಕರ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.
  ನಗರ ಆಸ್ಪತ್ರೆಯಲ್ಲಿ ಆ್ಯಬುಲೆನ್ಸ್ ಚಾಲಕನನ್ನು ತಾತ್ಕಾಲಿಕ ವರ್ಗಾವಣೆ ರದ್ದುಗೊಳಿಸಿ ಇಲ್ಲಿಯೇ ಸೇವೆ ಮುಂದುವರಿಸುವುದಾಗಿ, 108 ಆ್ಯಂಬುಲೆನ್ಸ್‌ನ್ನು ಇಲ್ಲಿ ಶಾಶ್ವತವಾಗಿ ಇಡಲು 48 ಗಂಟೆ ಒಳಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಲಿಖಿತ ಭರವಸೆ- ಪ್ರತಿಭಟನೆ ಹಿಂದಕ್ಕೆ: ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಮೇಲಧಿಕಾರಿಗಳಿಗೆ ಮನವಿ ಸಲ್ಲಿಸುವುದು, ಇನ್ನೊಬ್ಬ ವೈದ್ಯರನ್ನು ಕೂಡಲೇ ನಿಯುಕ್ತಿಗೊಳಿಸುವುದು, ಮಂಗಳವಾರ ಕರ್ತವ್ಯ ಚ್ಯುತಿ ನಡೆಸಿದ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಲಿಖಿತವಾಗಿ ದೂರ ಪಡೆದು, ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳೋಗೆ ಮನವಿ ಸಲ್ಲಿಸುವುದಾಗಿ ಲಿಖಿತ ಆಶ್ವಾಸನೆ ನೀಡಿದ ನಂತರ ಪ್ರತಿಭಟನೆ ಹಿಂಡೆಯಲಾಯಿತು.
  ಈ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳೊಂದಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಎಂ.ಎ. ರಶೀದ್, ಎಐಸಿಸಿ ಸದಸ್ಯೆ ಚಂದ್ರಿಕಾ ಪರಮೇಶ್ವರ, ಕಸಾಪ ಅಧ್ಯಕ್ಷ ಸಂತೋಷಕುಮಾರ ಇಂಗಿನಶೆಟ್ಟ, ಶರಣು ಬಿರಾಳ, ನಗರಸಭೆ ಸದಸ್ಯ ರಾಮಕುಮಾರ ಸಿಂಘೆ, ದಸಂಸ ತಾಲೂಕು ಸಂಚಾಲಕ ಕೃಷ್ಣಪ್ಪ ಕರಣಿಕ, ಬಿಎಸ್ಪಿಯ ಶೇಖ ಬಾಬು ಉಸ್ಮಾನ್, ಪಿಐ ಶರಣಪ್ಪ ಹಿಪ್ಪರಗಿ ಪಾಲ್ಗೊಂಡರು. ಸ್ಥಳೀಯ ವೈದ್ಯಾಧಿಕಾರಿ ಡಾ. ಪಿ.ಎಂ. ಸಜ್ಜನ್ ಇದ್ದರು.
  ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಕುಮಾರ ಚವ್ಹಾಣ, ಮಾಜಿ ಸದಸ್ಯ ಹಾಶಮ್ ಖಾನ್, ಜಾವೀದ್, ಮಹಿಬೂಬ್, ಗ್ರಾಪಂ ಸದಸ್ಯ ನದೀಮ್, ನಾಗರಾಜ ಸಿಂಘೆ, ಸುರೇಶ ಮೆಂಗನ್, ರಾಚಯ್ಯ ಅಲ್ಲಮಶೆಟ್ಟಿ,  ಲತೀಫ ಪಟೇಲ್ ಸೇರಿದಂತೆ ನೂರಾರು ಜನ ಪ್ರತಿಭಟನಾಕಾರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.