ಗುಲ್ಬರ್ಗಾ

ಮತದಾನ ಜಾಗೃತಿ ಜಾಥಾ

Published On :

ಕನ್ನಡಪ್ರಭ ವಾರ್ತೆ, ಚಿಂಚೋಳಿ, ಏ.4
ಮೇ 5ರಂದು ನಡೆಯಲಿರುವ ಚಿಂಚೋಳಿ(ಮೀ) ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಲು ಪಪಂ ವತಿಯಿಂದ ಪಟ್ಟಣದಲ್ಲಿ ಆಯೋಜಿಸಿದ್ದ ಮತದಾರರಿಗೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಹಸೀಲ್ದಾರ ಜಗನ್ನಾಥರೆಡ್ಡಿ ಧರ್ಮರೆಡ್ಡಿ ಚಾಲನೆ ನೀಡಿದರು.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪಟ್ಟಣದ ಹಾರಕೂಡ ಚಿಂಚೋಳಿ ಚೆನ್ನಬಸವೇಶ್ವರ ಕಲ್ಯಾಣ ಮಂಟಪದಿಂದ ಚಂದಾಪುರ ನಗರದ ಗಾಂಧೀಜಿ ವೃತ್ತದವರೆಗೆ ಜಾಥಾ ನಡೆಸಲಾಯಿತು.
ಶೇಕಡವಾರು ಮತದಾನ ಹೆಚ್ಚಿಸಲು ಚುನಾವಣಾ ಆಯೋಗ ಅಭಿಯಾನ ಹಮ್ಮಿಕೊಂಡಿದೆ. ಆಯೋಗದ ಆದೇಶದಂತೆ ನೀವು ಮತದಾನ ಮಾಡಿ ನಿಮ್ಮವರನ್ನು ಕರೆ ತನ್ನಿ, ಮತದಾನ ನಿಮ್ಮ ಹಕ್ಕು ತಪ್ಪದೇ ಮತದಾನ ಮಾಡಿ,  ಪ್ರಜಾಪ್ರಭುತ್ವದ ಬಲವರ್ಧನೆಗೆ ಕಡ್ಡಾಯವಾಗಿ ಮತ ಹಾಕಿ, ಮತದಾನ ಸಂವಿಧಾನಾತ್ಮಕ ಹಕ್ಕು ಅದನ್ನು ತಪ್ಪದೇ ಚಲಾಯಿಸಿ, ಜಾಗೃತಿ ಮತದಾನ ಸದೃಢ ಪ್ರಜಾಪ್ರಭುತ್ವ, ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಕ್ಷಮ್ಯ ಅಪರಾಧ ಮತ್ತು ಶಿಕ್ಷಾರ್ಹ.
ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಚಿತ ಪಡಿಸಿಕೊಳ್ಳಿ, 18 ವರ್ಷ ಮೇಲ್ಪಟ್ಟವರು ಹೆಸರು ಸೇರ್ಪಡೆ ಮಾಡಿಸಿ, ಚುನಾವಣಾ ಗುರುತಿನ ಚೀಟಿ ಇದ್ದರೂ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಮತದಾನಕ್ಕೆ ಅವಕಾಶವಿಲ್ಲ ಎನ್ನುವ ಘೋಷಣಾ ವಾಕ್ಯಗಳೊಂದಿಗೆ ಎಲ್ಲ ಮತದಾರರಲ್ಲಿ ಮತದಾನ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಮುಖ್ಯಾಧಿಕಾರಿ ಸುರೇಶ ಬಬಲಾದ ತಿಳಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣದ ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಟ್ಟಣ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.