ಗುಲ್ಬರ್ಗಾ

ಬಿಸಿಲೂರುಗಳಲ್ಲಿ ಕಚೇರಿ ವೇಳೆ ಬದಲಾವಣೆ

Published On :

ಗುಲ್ಬರ್ಗ:  ರಾಜ್ಯದ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ. ಗುಲ್ಬರ್ಗ ಹಾಗೂ ಬೆಳಗಾವಿ ವಿಭಾಗಗಳ ಸರ್ಕಾರಿ ನೌಕರರು ಬಿಸಿಲಿನ ಬೇಗೆಯಿಂದ ಕೊಂಚ ಆರಾಮವಾಗಿ ಇರಬಹುದು. ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪಕ್ಕೊಳಗಾಗುವ ಗುಲ್ಬರ್ಗ ವಿಭಾಗದ ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ಬಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಸರ್ಕಾರದ ಆಡಳಿತ ಕಚೇರಿಗಳ ಬೇಸಿಗೆ ಕಾಲದ ಕೆಲಸದ ವೇಳಾವಧಿಯನ್ನು ಬೆಳಗ್ಗೆಯಿಂದ ಕಾರ್ಯನಿರ್ವಹಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2013-14ನೇ ಸಾಲಿಗೆ ಅನ್ವಯಿಸುವಂತೆ ಮುಂದಿನ ಆದೇಶದವರೆಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಗ್ಗೆ 8ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಾರ್ಯನಿರ್ವಹಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಡಾ. ಗೀತಾ ಎಲ್. ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.