ಗುಲ್ಬರ್ಗಾ

ನೀತಿ ಸಂಹಿತೆ; ಅಸಮಾಧಾನ

Published On :

ಗುಲ್ಬರ್ಗ: ಏ.10 ರವರೆಗೆ ವಿಧಿಸಲ್ಪಟ್ಟ ನೀತಿ ಸಂಹಿತೆ ಜಾರಿಗೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಬಗ್ಗೆ ಒಂದು ಸ್ಪಷ್ಟತೆಯನ್ನು ಒದಗಿಸುವಲ್ಲಿ ಚುನಾವಣಾಧಿಕಾರಿಗಳು ಹಿಂದೇಟು ಹಾಕುತ್ತಿರುವುದು ಅಸಮಾಧಾನವಿದೆ ಎಂದು ಕೆಜಿಪಿ ಗುಲ್ಬರ್ಗ ಘಟಕದ ಅಧ್ಯಕ್ಷ ಬಸವರಾಜ ಇಂಗಿನ್ ಹೇಳಿದರು.
  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ನಿಟ್ಟಿನಲ್ಲಿ ಯಾವ ರೀತಿಯ ಸಭೆ- ಸಮಾರಂಭಗಳು ಕೈಗೊಳ್ಳುವಲ್ಲಿ ಅನುಮತಿ ಪಡೆಯಬೇಕು ಎಂಬ ದೃಢ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಚುನಾವಣೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದರು.
  ನೀತಿ ಸಂಹಿತೆಯಲ್ಲಿ ಏನಿದೆ, ಯಾತಕ್ಕಾಗಿದೆ ಎಂಬ ಸಾಮಾನ್ಯ ಜ್ಞಾನವೂ ಅಧಿಕಾರಿ ವರ್ಗದವರಲ್ಲಿ ಇಲ್ಲ ಎಂಬಂತೆ ವರ್ತಿಸಲಾಗುತ್ತಿದೆ. ಇದರಿಂದ ಕೆಜಿಪಿ ಕಾರ್ಯ ಚಟುವಟಿಕೆಗಳು ಕೈಗೊಳ್ಳುವಲ್ಲಿ ಕಿರಿಕಿರಿಯನ್ನುಂಟು ಮಾಡಲಾಗುತ್ತಿದೆ ಎಂದರು.
  ಚುನಾವಣೆ ನೀತಿ ಸಂಹಿತೆ ಪಾಲನೆ ಸಂಬಂಧ ನಿಖರವಾದ ಮಾಹಿತಿ ಪಡೆಯಲು ಹೋಗಿದ್ದ ಸಂದರ್ಭದಲ್ಲಿ ಸರಿಯಾದ ಮತ್ತು ಸಮರ್ಪಕವಾದ ಉತ್ತರ ನೀಡುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಪೊಲೀಸರ ಬಳಿ ಹೋದರೆ, ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಿ ಎನ್ನುತ್ತಾರೆ. ಅವರನ್ನು ಭೇಟಿಯಾದರೆ, ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿಯನ್ನು ಕಾಣಿರಿ ಎನ್ನುತ್ತಾರೆ. ಹೀಗೆ ಒಬ್ಬರ ಮೇಲೆ ಒಬ್ಬರು ಜವಾಬ್ದಾರಿಯಿಂದ ನುಣಚಿಕೊಳ್ಳುತ್ತಾರೆ ಎಂದು ಅವರು ಆಪಾದಿಸಿದರು.
  ಒಟ್ಟಿನಲ್ಲಿ ಚುನಾವಣಾ ನೀತಿ ಸಂಹಿತೆ ಹಿಂಸೆಯಾಗಿ ಮಾರ್ಪಡಿಸಿದಂತಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಸಂಹಿತೆ ಬಗ್ಗೆ ಸರಿಯಾದ ಕ್ರಮಗಳು ಅನುಸರಿಸದಿರುವುದು ಇದಕ್ಕೆಲ್ಲ ಕಾರಣ ಎಂದು ವಿವರಿಸಿದರು.
ಸೇರ್ಪಡೆ: ಪ್ರಗತಿಪರ ಚಿಂತಕ ಬಿ.ವಿ. ಚಕ್ರವರ್ತಿ, ಸಿಂಡಿಕೇಟ್ ಸದಸ್ಯ ಎಸ್.ಜಿ. ಭಾರತಿ, ಎಚ್‌ಕೆಸಿಸಿಐ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ, ಹಿರಿಯ ವಕೀಲ ಉಸ್ತಾದ್ ಸಾದತ್ ಹುಸೇನ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಯಡಿಯೂರಪ್ಪ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆಂದು ಅವರು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.