ಜನರಲ್ಲಿ ಆರೋಗ್ಯ ಅರಿವು ಮೂಡಿಸುವುದು ಅಗತ್ಯ
ಯಾದಗಿರಿ: ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಜನತೆಯಲ್ಲಿ ಆಯುಷ್ ವೈದ್ಯರು ಆರೋಗ್ಯದ ಕುರಿತು ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಮಲ್ಲಿಕಾರ್ಜುನ ಮುಕ್ಕಾ ಹೇಳಿದರು. ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಆಯುಷ್ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೈದ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆಯುಷ್ ವೈದ್ಯರು ಆಯುಷ್ಯ ವೈದ್ಯ ಪದ್ಧತಿಯಿಂದ ಜನರ ಹಲವಾರು ರೋಗಗಳನ್ನು ಗುಣಪಡಿಸುವ ಮೂಲಕ ತಮ್ಮ ಇಲಾಖೆ ಹಾಗೂ ಪದ್ಧತಿಯನ್ನು ಜನಪ್ರಿಯತೆ ಹೆಚ್ಚಿಸಲು ಕರೆ ನೀಡಿದರು.
ತಾಲೂಕು ಆರೋಗ್ಯಧಿಕಾರಿ ಡಾ.ಚಂದ್ರಕಾಂತ ನರಿಬೋಳಿ ಮಾತನಾಡಿ, ಇಂತಹ ಕಾರ್ಯಾಗಾರದಿಂದ ವೈದ್ಯರಿಗೆ ವೈದ್ಯಕೀಯ ಕ್ಷೇತ್ರದಲ್ಲಿನ ಬೆಳವಣಿಗೆಗಳನ್ನು ತಿಳಿದುಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಪ್ರಭಾರಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಎ.ಪಿ ಗಂಗನಾಳ ಹಾಗೂ ಡಾ.ಅಭಯಕುಮಾರ ಮಾತನಾಡಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಮಾಧವ ದಿಗ್ಗಾಂವಿ ಬಳ್ಳಾರಿ, ಡಾ.ಸಂತೋಷ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಕಾರ್ಯಕ್ರಮದಲ್ಲಿ ಡಾ. ಓಂಪ್ರಕಾಶ ಕಟ್ಟಿಮನಿ, ಡಾ.ರಮೇಶ ಸಜ್ಜನ್, ಡಾ. ಸಿದ್ದರಾಮ ಹೊನ್ಕಲ್, ಡಾ.ಪ್ರಕಾಶ ರಾಜಾಪುರ, ಡಾ.ಪ್ರಮೋದ ಕುಲಕರ್ಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

