ಗುಲ್ಬರ್ಗಾ

ಪಕ್ಷೇತರರಾಗಿ ಸ್ಪರ್ಧೆ

Published On :

ಯಾದಗಿರಿ: ಮಡಿವಾಳ ಸಮಾಜ ಯಾದಗಿರಿ ಮತಕ್ಷೇತ್ರದಲ್ಲಿ 15 ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಎಲ್ಲಾ ಪಕ್ಷಗಳೂ ಸಮಾಜವನ್ನು ಕಡೆಗಣಿಸಿವೆ. ಆದ್ದರಿಂದ ಸಮಾಜದ ಬೆಂಬಲದಿಂದ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವುದಾಗಿ ಮಡಿವಾಳ ಸಂಘದ ಜಿಲ್ಲಾಧ್ಯಕ್ಷ ಜಲಂಧರರಾವ ಮುಂಡರಗಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಡಿವಾಳ ಸಮಾಜ ತುಳಿತಕ್ಕೊಳಗಾಗಿದೆ. ಇದುವರೆಗೆ ಸಮಾಜದ ಮತವನ್ನು ಪಡೆದು ಆಯ್ಕೆಯಾದ ಯಾರೂ ನಮ್ಮ ಬಗ್ಗೆ ಕಾಳಜಿ ತೋರಲಿಲ್ಲ. ಇದರಿಂದ ಅನೇಕ ಸೌಲಭ್ಯಗಳಿಂದ ಸಮಾಜ ವಂಚಿತವಾಗಿದೆ. ಆದ್ದರಿಂದ ಕೆಲ ತಿಂಗಳಿಂದ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನ ನಡೆಸಲಾಗಿದೆ.
ಸಮಾಜದ ಮುಖಂಡರೊಂದಿಗೆ ಚರ್ಚಿಸಿದಾಗ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಲಹೆ ನೀಡಿದರು. ಆದ್ದರಿಂದ ಏ. 15ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಅವರು ತಿಳಿಸಿದರು.
ಕ್ಷೇತ್ರ ಹಿಂದುಳಿದಿದೆ. ಇದಕ್ಕೆ ಎಲ್ಲಾ ಪಕ್ಷಗಳು ಹಾಗೂ ಶಾಸಕರು ಕಾರಣ. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ಎಲ್ಲಾ ಜಾತಿ ಜನಾಂಗಕ್ಕೆ ಸಮಾನ ಆದ್ಯತೆ ನೀಡುವ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ ಎಂಬ ಭರವಸೆ ನೀಡುತ್ತೇನೆ ಎಂದರು. ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಮಡಿವಾಳಪ್ಪ ಬಿಜಾಸಪುರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.