ಗುಲ್ಬರ್ಗಾ

ಕನ್ನಡ ನಾಡು, ನುಡಿ ರಕ್ಷಣೆಗೆ ಬದ್ಧರಾಗಿ: ಹಿರೇಮಠ

Published On :

ಕನ್ನಡಪ್ರಭ ವಾರ್ತೆ, ಜೇವರ್ಗಿ, ಏ.9
ನಾಡಿನ ಎಲ್ಲ ಕನ್ನಡಪರ ಸಂಘಟನೆಗಳು ನಮ್ಮ ನಾಡು, ನುಡಿ ರಕ್ಷಣೆಗೆ ಬದ್ಧರಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಜಿಲ್ಲಾ ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಹೇಳಿದರು.
ಅವರು ಸೋಮವಾರ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಏರ್ಪಡಿಸಿದ್ದ 3ನೇ ಸ್ವಾಭಿಮಾನಿ ಕನ್ನಡಿಗರ ಸಮಾವೇಶದಲ್ಲಿ ಮಾತನಾಡಿದರು.
ಜಿಪಂ ಪ್ರತಿ ಪಕ್ಷದ ಮಾಜಿ ನಾಯಕ ಬಸವರಾಜ ಪಾಟೀಲ್ ಮಾತನಾಡಿ, ಕನ್ನಡದ ಹಿತಕ್ಕೆ ಧಕ್ಕೆಯಾದಾಗ ಎಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕು ಎಂದರು.
ಸೊನ್ನ ವಿರಕ್ತಮಠದ ಶಿವಾನಂದ ಸ್ವಾಮೀಜಿ ಸಮಾವೇಶ ಉದ್ಘಾಟಿಸಿದರು. ಯಲಗೋಡದ ಗುರುಲಿಂಗ ಸ್ವಾಮೀಜಿ, ಇಜೇರಿಯ ಹಜರತ್ ಸೈಯದ್ ಸಜ್ಜಾದೆ, ಸ್ಥಳೀಯ ಕನಕ ಗುರುಪೀಠದ ಲಿಂಗಣ್ಣ ಶರಣರು ಸಾನ್ನಿಧ್ಯ ವಹಿಸಿದ್ದರು.
ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಸಗರನಾಡು ಹೆಬ್ಬಾಗಿಲು ಪುಸ್ತಕ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಹಿಳಾಧ್ಯಕ್ಷೆ ಪಾರ್ವತಿ ಸರದಾರ, ಜಿಲ್ಲಾ ಕರವೇ ಅಧ್ಯಕ್ಷ ಕಲ್ಯಾಣರಾವ ಪಾಟೀಲ್, ಹುಸೇನ್ ಪಟೇಲ್ ಹೂಡಾ, ಜಿಪಂ ಮಾಜಿ ಸದಸ್ಯ ಅಶೋಕ ಸಾಹು ಗೋಗಿ, ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಶಿವಲಿಂಗಪ್ಪ ಕಿನ್ನೂರ್ ಇದ್ದರು.
ಇದೇ ಸಂದರ್ಭದಲ್ಲಿ ಹೈ-ಕ ಜನಪರ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ, ಬಿರಾಳ ಗ್ರಾಪಂ ಅದ್ಯಕ್ಷ ಮಲ್ಲಾರೆಡ್ಡಿ ಪಾಟೀಲ್, ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷ ಶಂಕರ ಕಟ್ಟಿಸಂಗಾವಿ, ಪತ್ರಕರ್ತ ಸಂಗರಾಜ ವಾಲಿಕಾರ್ ಅವರಿಗೆ ಸನ್ಮಾನಿಸಲಾಯಿತು.  ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ, ತಾಲೂಕು, ಗ್ರಾಮ ಘಟಕದ ಎಲ್ಲ ಪ್ರತಿನಿಧಿಗಳು ಭಾಗವಹಿಸಿದ್ದರು. ಪರಮೇಶ್ವರ ಬಿರಾಳ ಸ್ವಾಗತಿಸಿದರು. ಅರುಣರೆಡ್ಡಿ ಶಿವಪುರ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.