ಗುಲ್ಬರ್ಗಾ

ಮತದಾನಕ್ಕೆ ಸಿದ್ಧತೆ

Published On :

ಸುರಪುರ: ಈ ಬಾರಿಯ ವಿಧಾನಸಭೆ ಚುನಾವಣೆಯನ್ನು ಕ್ಷೇತ್ರದ ಮತದಾರರು ಮುಕ್ತವಾಗಿ ಮತ್ತು ಶಾಂತಿಯುತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಬಸವರಾಜ ಸುಣ್ಣದ ತಿಳಿಸಿದರು.
ಇಲ್ಲಿಯ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 268 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1,09,583 ಪುರಷರು ಮತ್ತು 1,06,211 ಮಹಿಳಾ ಮತದಾರರು ಸೇರಿದಂತೆ ಒಟ್ಟು 2,15,794 ಮತದಾರ ತಮ್ಮ ಮತವನ್ನು ಚಲಾಯಿಸುವ ಹಕ್ಕು ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ಬಸವರಾಜ ಸುಣ್ಣದ ಹೇಳಿದರು. ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಇನ್ನೆರಡು ದಿನ ಬಾಕಿ ಇರುವುದರಿಂದ ಮತದಾರರ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಏ.11ರಂದು ಮತದಾರ ಸಂಖ್ಯೆಯ ಸ್ಪಷ್ಟ ಚಿತ್ರಣ ಸಿಗಲಿದೆ ಎಂದರು.
ಚುನಾವಣೆಗೆ 71 ರೂಟ್‌ಗಳನ್ನು ರಚಿಸಲಾಗಿದೆ. ನಾರಾಯಣಪುರ-2, ತಿಂಥಣಿ-1, ಮತ್ತು ಮಾಳನೂರು-1 ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. 6-ಎಂಸಿಸಿ ತಂಡ, 6-ವಿಶೇಷ ಜಾಗೃತ ದಳ, ಎಸ್‌ಎಸ್‌ಟಿ-1 ತಂಡ ರಚಿಸಲಾಗಿದೆ. 126-ಅತಿಸೂಕ್ಷ್ಮ, 79-ಸೂಕ್ಷ್ಮ, 60-ಸಾಮಾನ್ಯ ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ಸುಣ್ಣದ ತಿಳಿಸಿದರು. ಕ್ಷೇತ್ರದ ಯಾವುದೇ ಭಾಗದಲ್ಲಾದರೂ ಚುನಾವಣೆ ನೀತಿ ಸಂಹಿತೆ  ಉಲ್ಲಂಘನೆ ಕಂಡುಬಂದಲ್ಲಿ ನಾಗರಿಕರು ತಕ್ಷಣವೇ ಮಾಹಿತಿ ನೀಡಬೇಕು ಎಂದು ಕೋರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.