ಗುಲ್ಬರ್ಗಾ

ನಾಯಿಗಳ ಹಾವಳಿ ತಡೆಗೆ ಕರವೇ ಆಗ್ರಹ

Published On :

ಗುಲ್ಬರ್ಗ/ಶಹಾಬಾದ್: ವಾಡಿ ಪಟ್ಟಣದ ಎಲ್ಲ ವಾರ್ಡಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಅವುಗಳ ಹಾವಳಿಯನ್ನು ಕೂಡಲೇ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ವಲಯ ಅಧ್ಯಕ್ಷ ಸಿದ್ದು ಪಂಚಾಳ ಜಿಲ್ಲಾಧಿಕಾರಿಗಳಿಗೆ, ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣದ ತರಕಾರಿ ಮಾರುಕಟ್ಟೆ ಪ್ರದೇಶದಲ್ಲಿ ಮಾಂಸದ ಅಂಗಡಿಯ ಮಾಲೀಕರು ಸ್ವಚ್ಛತೆಯನ್ನು ಕಾಪಾಡದೆ, ಮಾಂಸವನ್ನು ತೆರೆದಿಟ್ಟು ಮಾರಾಟ ಮಾಡುತ್ತಿದ್ದಾರೆ, ಮಾಂಸದ ತುಂಡುಗಳನ್ನು ರಸ್ತೆಗೆ ಎಸೆಯುತ್ತಿರುವುದರಿಂದ ನಾಯಿಗಳು ತಿಂದು, ಪಟ್ಟಣದ ವಿವಿಧ ಭಾಗದಲ್ಲಿ ಜನರಿಗೆ, ಶಾಲಾ- ಮಕ್ಕಳಿಗೆ ಕಚ್ಚುತ್ತಿವೆ. ಈ ಕೂಡಲೇ ಮಾಂಸದ ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡಲು ಸೂಕ್ತ ನಿರ್ದೇಶನ ನೀಡಿ, ನಾಯಿಗಳ ಹಾವಳಿ ತಡೆಗಟ್ಟಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ನೀರು, ವಿದ್ಯುತ್‌ಗಾಗಿ ಮನವಿ: ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದರಿಂದ ಪಟ್ಟಣದಲ್ಲಿ ಕುಡಿವ ನೀರು ಮತ್ತು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ, ಪುರಸಭೆ ಮುಖ್ಯಾಧಿಕಾರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ವಲಯ ಅಧ್ಯಕ್ಷ ಸಿದ್ದು ಪಂಚಾಳ ಮನವಿ ಸಲ್ಲಿಸಿದ್ದಾರೆ.
ಪಟ್ಟಣದಲ್ಲಿ ಹಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, ಬೇಸಿಗೆಯಲ್ಲಿ ಅದು ಹೆಚ್ಚಾಗುತ್ತಿದೆ.  ಈ ಬಗ್ಗೆ ಪುರಸಭೆಗೆ ಕೇಳಿದರೆ ವಿದ್ಯುತ್ ಅಭಾವ ಎಂದು ಉತ್ತರ ನೀಡುತ್ತಿದ್ದಾರೆಂದು ದೂರಿದ್ದಾರೆ.
ನಿಯಮಿತ ಸಮಯದಲ್ಲಿ ವಿದ್ಯುತ್ ಕಡಿತಗೊಳಿಸಿ ನೀರು ಸರಬರಾಜುಗೊಳಿಸಬೇಕು ಮತ್ತು ರಾತ್ರಿ ಹೊತ್ತು ವಿದ್ಯುತ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.