ಗುಲ್ಬರ್ಗಾ

ಶಾಸಕ ನರಿಬೋಳ ಸೇರಿ 27 ಮಂದಿ ಖುಲಾಸೆ

Published On :

ಜೇವರ್ಗಿ:   2008ರಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಪಟ್ಟಂತೆ ಶಾಸಕ ದೊಡ್ಡಪ್ಪಗೌಡ ಪಾಟೀಲ ಸೇರಿದಂತೆ 27ಜನ ಪ್ರಕರಣದಿಂದ ಖುಲಾಸೆಯಾಗಿದ್ದಾರೆ.
ಘಟನೆ ವಿವರ: ಕಳೆದ 2008ರಲ್ಲಿ ಪಟ್ಟಣದಲ್ಲಿರುವ ಮಹಾಲಕ್ಷ್ಮೀ ದೇವಸ್ಥಾನ ಕಳ್ಳತನವಾಗಿತ್ತು. ಕಳ್ಳತನ ಮಾಡಿದ ಆರೋಪಿಗಳನ್ನು ತ್ವರಿತಗತಿಯಲ್ಲಿ ಬಂಧಿಸುವಂತೆ ಒತ್ತಾಯಿಸಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಸೇರಿದಂತೆ ಇತರರು ಹೆದ್ದಾರಿ ತಡೆ ನಡೆಸಿದ್ದರು. ಹೆದ್ದಾರಿ ತಡೆ ನಡೆಸಿದವರ ವಿರುದ್ಧ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿತ್ತು. ವಾದ, ಪ್ರತಿವಾದ ಆಲಿಸಿದ ನಂತರ ಜೆಎಂಎಫ್‌ಸಿ ನ್ಯಾಯಾಧೀಶರು ಪ್ರಕರಣವನ್ನು ಇತ್ಯರ್ಥಗೊಳಿಸಿ ಖುಲಾಸೆಗೊಳಿಸಲಾಗಿದೆ. ಶಾಸಕ ಸೇರಿದಂತೆ 27ಜನರ ಪರ ನ್ಯಾಯವಾದಿ ಬಸವರಾಜ ಕಂದಗಲ್, ಶಾಂತಗೌಡ ನರಿಬೋಳ, ರಾಜಶೇಖರ ಶಿಲ್ಪಿ ವಾದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.