ಚುನಾವಣಾ ಪ್ರಚಾರ ಪೂರ್ವಭಾವಿ ಸಭೆಯಲ್ಲಿ ಪ್ರಿಯಾಂಕ್ ಖರ್ಗೆ
ಕನ್ನಡಪ್ರಭ ವಾರ್ತೆ, ಚಿತ್ತಾಪುರ, ಏ.12
ಬಿಜೆಪಿ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಮುಖಂಡರ ಒಳಜಗಳದಲ್ಲೆ ಕಾಲ ಕಳೆದು ರಾಜ್ಯದ ಜನರಿಗೆ ವಂಚನೆ ಮಾಡಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಿಯಾಂಕ ಖರ್ಗೆ ಹೇಳಿದರು.
ತಾಲೂಕಿನ ಅಲ್ಲೂರ (ಕೆ) ಗ್ರಾಮದಲ್ಲಿ ಜರುಗಿದ ಚುನಾವಣಾ ಪ್ರಚಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮತದಾರರು ಈ ಬಾರಿ ಬದಲಾವಣಿ ಬಯಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದನ್ನು ಎದುರು ನೋಡುತ್ತಿದ್ದಾರೆ ಎಂದರು.
ಕಾಂಗ್ರೆಸ್ನಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಮತದಾರರು ಚುನಾವಣಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಿಸಬೇಕೆಂದು ಅವರು ಮನವಿ ಮಾಡಿದರು. ಕಾಂಗ್ರೆಸ್ ಮುಖಂಡ ನಾಗಣಗೌಡ, ಗುಂಡು ಕುಲಕರ್ಣಿ ಸಮ್ಮುಖದಲ್ಲಿ ಬಸವರಾಜಪ್ಪ ಗೌಡ ಠಾಣಗುಂದಿ, ಮಲ್ಲಿಕಾರ್ಜುನ ಗುರೆಗೋಳ, ಸದ್ದಾಮ್ ಹುಸೇನ್ ನಾಲವಾರ, ಮೋನಪ್ಪ ಮುರಾಳ, ಕಾಶಪ್ಪ ನರಬೋಳಿ, ದೇವಪ್ಪ ಬೈಯನೋರ್, ಹಣಮಂತ ನಾಟೀಕಾರ, ಮಲ್ಲಪ್ಪ ತಳವಾರ, ಅಯ್ಯಪ್ಪ ಹಲಗಿ ಸೇರಿದಂತೆ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭಿಮಣ್ಣ ಸಾಲಿ, ಮುಖಂಡರಾದ ನಾಗರೆಡ್ಡಿ ಪಾಟೀಲ್ ಕರದಾಳ, ಲಿಂಗಾರೆಡ್ಡಿ ಭಾಸರೆಡ್ಡಿ, ರಾಧಾಕೃಷ್ಣ ವಾಡಿ, ಶಾಂತಪ್ಪ ಚಾಳಿಕರ್, ಜಗಣಗೌಡ ರಾಮತೀರ್ಥ, ಶರಣಗೌಡ ಭೀಮನಳ್ಳಿ, ರಂಗನಾಥ ಜಡಿ, ಮಶಾಕ ಪಟೇಲ್, ಶರಣು ಡೋಣಗಾಂವ, ಶಿವಕುಮಾರ ಸುಲ್ತಾನಪುರ, ಶಂಕರ ಚೋಕ್ಲಾ, ಅನಂದ ಮುಡಬೂಳ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

