ಪಕ್ಷೇತರನಾಗಿ ಕಾಂಗ್ರೆಸ್ನ ಶರಣಪ್ಪ ಗೌಡಗೇರಾ ಅಖಾಡಕ್ಕೆ
ಯಾದಗಿರಿ: ಗುರಮಠಕಲ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ಜಿಪಂ ಮಾಜಿ ಸದಸ್ಯ ಕಾಂಗ್ರೆಸ್ನ ಶರಣಪ್ಪ ಗೌಡಗೇರಾ ತಿಳಿಸಿದ್ದಾರೆ. ಶುಕ್ರವಾರ ಇಲ್ಲಿನ ಪತ್ರಿಕಾ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕ ಬಾಬುರಾವ ಚಿಂಚನಸೂರ ಅವರು ಕಳೆದ 5 ವರ್ಷಗಳಲ್ಲಿ ಮತಕ್ಷೇತ್ರವನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ. ಹೀಗಾಗಿ ಕ್ಷೇತ್ರದ ಮತದಾರರು ಮತ್ತು ತಮ್ಮ ಬೆಂಬಲಿಗರು ಚುನವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿರುವುದರಿಂದ ಈ ಬಾರಿ ಸ್ಪರ್ಧೆಗಿಳಿಯುತ್ತಿದ್ದೇನೆಂದು ತಿಳಿಸಿದರು.
ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಗುರಮಠಕಲ್ ಪ್ರತಿನಿಧಿಸುತ್ತಿದ್ದ ವೇಳೆ ಕ್ಷೇತ್ರ ರಾಮ ರಾಜ್ಯದಂತಿತ್ತು. ಖರ್ಗೆ ಅವರು ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದರು. ಆದರೆ ಚಿಂಚನಸೂರ ಅವರು ಮೂಲ ಕಾರ್ಯಕರ್ತರನ್ನು ಮರೆತಿದ್ದು ತಮಗೆ ತೀವ್ರ ಬೇಸರ ತಂದಿದೆ. ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತನಾಗಿ ಸುಮಾರು 40 ವರ್ಷ ಸೇವೆ ಸಲ್ಲಿಸಿದ್ದೇನೆ. ಆದರೂ ಕಾಂಗ್ರೆಸ್ನಿಂದ ಟಿಕೆಟ್ ಕೇಳಲಿಲ್ಲ. ಕೇಳಿದ್ದರೂ ನೀಡುತ್ತಿರಲಿಲ್ಲ ಎನ್ನುವುದು ಗೊತ್ತಿತ್ತು. ಆದ್ದರಿಂದ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಬಯಸಿ ಈ ಬಾರಿ ಚುನವಣೆಗೆ ಸ್ಪರ್ಧಿಸುತ್ತಿದ್ದು, ಜನತೆ ತಮ್ಮನ್ನು ಬೆಂಬಲಿಸಲಿದ್ದಾರೆ ಎಂದು ಗೌಡಗೇರಾ ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

