ಗುಲ್ಬರ್ಗಾ

ಬಾಡೂಟಕ್ಕೆ ತಡೆ

Published On :

ಯಾದಗಿರಿ: ಇಲ್ಲಿಯ ಮೆಥೋಡಿಸ್ಟ್ ಚರ್ಚ್‌ನಲ್ಲಿ ಬಾಡೂಟದ ವ್ಯವಸ್ಥೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ನೇತೃತ್ವದ ತಂಡ ದಾಳಿ ನಡೆಸಿ, ಅಡುಗೆ ಸಾಮಗ್ರಿಗಳನ್ನು ವಶಕ್ಕೆ ತೆಗೆದುಕೊಂಡ ಘಟನೆ ಗುರುವಾರ ನಡೆದಿದೆ. ಕಾಂಗ್ರೆಸ್‌ನಿಂದ ಬಾಡೂಟ ವ್ಯವಸ್ಥೆ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ತಂಡ ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿತು. ಆ ಸಂದರ್ಭದಲ್ಲಿ ಶಾಸಕ ಡಾ.ಮಾಲಕರೆಡ್ಡಿ ಅವರು ಅಲ್ಲಿದ್ದರು. ಅನೇಕರು ಆ ಸಂದರ್ಭದಲ್ಲಿ ಊಟ ಮಾಡುತ್ತಿದ್ದರು. ಆದರೆ ಅಧಿಕಾರಿಗಳು ಅದಕ್ಕೆ ತಡೆಯೊಡ್ಡಿ, ತಯಾರಿಸಿದ್ದ ಅಡುಗೆ ಹಾಗೂ ಇನ್ನಿತರ ಸಾಮಗ್ರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಚರ್ಚ್ ಆಡಳಿತಕ್ಕೆ, ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ನೋಟಿಸ್ ನೀಡಲಾಗಿದೆ. ಶನಿವಾರ ಈ ಕುರಿತು ಮಾಹಿತಿ ನೀಡುವಂತೆ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.