ಗುತ್ತೇದಾರ, ಪವಾಡಶೆಟ್ಟಿ ಉಮೇದುವಾರಿಕೆ
ಆಳಂದ: ಮೆ.5 ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಉಮೆದುವಾರಿಕೆ ಬಯಸಿ ಸೋಮವಾರ ಇಲ್ಲಿನ ಕೆಜೆಪಿ-ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಕೆಜೆಪಿ: ಬೆಳಗಿನ 11ರ ಸುಮಾರಿಗೆ ಕೆಜೆಪಿ ಪಕ್ಷದ ಅಭ್ಯರ್ಥಿ ಆಗಿರುವ ಪಕ್ಷದ ರಾಜ್ಯ ವಕ್ತಾರ ಮಾಜಿ ಉಪಸಭಾಪತಿ ಬಿ.ಆರ್. ಪಾಟೀಲ್ ಅವರು ಪಟ್ಟಣದ ಕೆಜೆಪಿ ಕಚೇರಿಯಿಂದ ತಹಸೀಲ್ದಾರ್ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ಚುನಾವಣಾಧಿಕಾರಿ ಡಾ. ಬಿ. ರಾಜಣ್ಣ ಅವರಿಗೆ ನಾಮಪತ್ರ ಸಲ್ಲಿಸಿದರು.
ಕೆಜೆಪಿ ಪಕ್ಷದ ತಾಲೂಕು ಅಧ್ಯಕ್ಷ ಶಿವಪುತ್ರಪ್ಪ ಪಾಟೀಲ್, ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ ಪಾಟೀಲ್, ಅಹ್ಮದ್ ಅಲಿ ಚುಲಬುಲ್, ಗುರುನಾಥ ಷಣ್ಮುಖ ಮತ್ತು ಮಲ್ಲಿನಾಥ ಯಲಶೆಟ್ಟಿ ಉಪಸ್ಥಿತರಿದ್ದರು. ಮೆರವಣಿಗೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಪಾಲ್ಗೊಂಡಿದ್ದರು.
ಜೆಡಿಎಸ್: ಜೆಡಿಎಸ್ ಜಿಲ್ಲಾಧ್ಯಕ್ಷರೂ ಆಗಿರುವ ಶಾಸಕ ಸುಭಾಷ ಗುತ್ತೇದಾರ ಅವರು ತಮ್ಮ ಬೆಂಬಲಿಗರೊಂದಿಗೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಕೈಗೊಂಡು ಬಳಿಕ ಚುನಾವಣಾಧಿಕಾರಿ ಕಚೇರಿಯಲ್ಲಿ ಉಮೆದುವಾರಿಕೆ ಬಯಸಿ ನಾಮಪತ್ರ ಸಲ್ಲಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಚಂದ್ರಶೇಖರ ಪಾಟೀಲ್, ನಿಜಲಿಂಗಪ್ಪ ಕೊರಳ್ಳಿ, ಮಹಾರುದ್ರಪ್ಪ ಕುಲಕರ್ಣಿ, ಚನ್ನಬಸವ ಪಾಟೀಲ್, ಅಪ್ಪಾಸಾಬ್ ಗುಂಡೆ, ಹರ್ಷಾನಂದ ಗುತ್ತೇದಾರ ಉಪಸ್ಥಿತರಿದ್ದರು.
ಬಿಜೆಪಿ: ಬಿಜೆಪಿ ಪಕ್ಷದ ಅಭ್ಯರ್ಥಿ ಆಗಿರುವ ಬಸವರಾಜ ಪವಾಡಶೆಟ್ಟಿ ಅವರು ಸೋಮವಾರ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಮುಖಂಡರು, ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಸಿ.ಎನ್. ತಾಟಿ, ಸಂಜು ಮಿಸ್ಕಿನ್, ಡಿ.ಎ.ಚಿಲ್ಲಾಳ, ಸಿದ್ರಾಮಪ್ಪ ಪಾಟೀಲ್, ಬಸವರಾಜ ಬಿರಾದಾರ ತಡಕಲ್, ಎಪಿಎಂಸಿ ಉಪಾಧ್ಯಕ್ಷ ತುಕಾರಾಮ ವಗ್ಗೆ ನಾಮಪತ್ರ ಸಲ್ಲಿಕೆ ವೇಳೆ ಇದ್ದರು. ನಾಮಪತ್ರ ಸಲ್ಲಿಸಿದ ಈ ಮುಖಂಡರು ಅಲ್ಲಲ್ಲಿ ತಮ್ಮ ಕಾರ್ಯಕರ್ತರ ಸಭೆಗಳನ್ನು ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

