ಗುಲ್ಬರ್ಗಾ

ಆಕ್ಸ್ಫರ್ಡ್ ಪುಸ್ತಕಗಳು ಕಡ್ಡಾಯ

Published On :

ಬೀದರ್: ಪ್ರಸಕ್ತ ಸಾಲಿನಿಂದ ಜಾರಿಗೆ ಬರಲಿರುವ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪಠ್ಯಪುಸ್ತಕಗಳ ಮುದ್ರಣ ಹಕ್ಕನ್ನು ಎನ್ಸಿಇಆರ್ಟಿ (ಃಈಊಖಖಿ) ಯಿಂದ ಪದವಿಪೂರ್ವ ಶಿಕ್ಷಣ ಇಲಾಖೆ ಪಡೆದುಕೊಂಡಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಪರೀಕ್ಷಾ ದೃಷ್ಟಿಯಿಂದ ಆಕ್ಸ್ಫರ್ಡ್ ಪಬ್ಲಿಕೇಷನ್ಸ್ ಪುಸ್ತಕಗಳನ್ನೇ ಉಪಯೋಗಿಸುವುದು ಕಡ್ಡಾಯ.
  ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳು ಮತ್ತು ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಪರೀಕ್ಷಾ ದೃಷ್ಟಿಯಿಂದ 2013-14ನೇ ಸಾಲಿನಿಂದ ಜಾರಿಗೆ ಬರಲಿರುವ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪುಸ್ತಕಗಳನ್ನು ಹೈದ್ರಾಬಾದ್ನ ಆಕ್ಸ್ಫರ್ಡ್ ಪಬ್ಲಿಕೇಷನ್ಸ್ ಮುದ್ರಿಸಿರುವ ಪಠ್ಯ ಪುಸ್ತಕಗಳನ್ನೇ ಉಪಯೋಗಿಸುವುದು ಕಡ್ಡಾಯವಾಗಿರುತ್ತದೆ ಎಂದು ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಸೂಚನೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು, ಆಧಾರ್ ಕಾರ್ಡ್ ಹಾಗೂ ಯಾವುದೇ ಶೆಡ್ಯೂಲ್ ಬ್ಯಾಂಕಿನಲ್ಲಿ ತೆರೆದ ಬ್ಯಾಂಕ್ ಖಾತೆ ಸಂಖ್ಯೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕಿರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪೂರ್ವಭಾವಿಯಾಗಿ ಮೇಲ್ಕಂಡ ದಾಖಲೆಗಳನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.