ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ: ಸಲಾದಪುರ
ಶಹಾಪುರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ 20 ತಿಂಗಳ ಆಡಳಿತ, ಅವರ ಜನಪರ ಕಾಳಜಿ ಮತ್ತು ಪಕ್ಷದ ಜಾತ್ಯತೀತ ನಿಲುವು ಮತದಾರರ ಮನದಲ್ಲಿದ್ದು, ಶಹಾಪುರ ಮತಕ್ಷೇತ್ರದ ಜನತೆ ಕಾಂಗ್ರೆಸ್ ಮತ್ತು ಕೆಜೆಪಿಯನ್ನು ತಿರಸ್ಕರಿಸಿ ಬದಲಾವಣೆ ಬಯಸಿ ಜೆಡಿಎಸ್‌ಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಶರಣಪ್ಪ ಸಲಾದಪುರ ತಿಳಿಸಿದರು.
ಜೆಡಿಎಸ್‌ನಿಂದ ಅಧಿಕೃತ ಬಿ ಫಾರ್ಮ್ ಸಲ್ಲಿಸಿ ನಂತರ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಶಹಾಪುರ ಮತಕ್ಷೇತ್ರದ ಅಭಿವೃದ್ಧಿ ಕೇವಲ ಕಾಗದ ಪತ್ರಗಳಲ್ಲಿ ಆಗಿದೆ. ಮತದಾರರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಹಿಂದಿನ ಶಾಸಕರು ವಿಫಲರಾಗಿದ್ದಾರೆ.
ಜೆಡಿಎಸ್ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿದ್ದು, ಹೊಸ ಬದಲಾವಣೆಗೆ ಸಜ್ಜಾಗಿದ್ದಾರೆ. ಇದಕ್ಕೆ ಕಾರ್ಯಕರ್ತರಲ್ಲಿನ ಉತ್ಸಾಹವೇ ಸಾಕ್ಷಿಯಾಗಿದೆ. ಕ್ಷೇತ್ರಾದ್ಯಂತ ಪ್ರಚಾರಕ್ಕಾಗಿ ಸಂಚರಿಸುತ್ತಿದ್ದು, ಎಲ್ಲೆಡೆ ಆಶೀರ್ವಾದ ಮಾಡುತ್ತಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

